ಬ್ರೇಕಿಂಗ್ ನ್ಯೂಸ್
02-11-23 01:09 pm HK News Desk ದೇಶ - ವಿದೇಶ
ನವದೆಹಲಿ, ನ.2: ಇಸ್ರೇಲ್ ದೇಶಕ್ಕೆ ತೈಲ, ಆಹಾರ ಸೇರಿದಂತೆ ಯಾವುದೇ ಸಾಮಗ್ರಿಗಳನ್ನು ನೀಡಬೇಡಿ. ಆ ದೇಶಕ್ಕೆ ರಫ್ತು ಮಾಡುವುದನ್ನೇ ನಿಲ್ಲಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ದೇಶದ ಮುಸ್ಲಿಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಅಲ್ಲದೆ, ಗಾಜಾ ಪಟ್ಟಿ ಮೇಲೆ ಇಸ್ರೇಲ್ ವಾಯುಪಡೆ ನಡೆಸುತ್ತಿರುವ ಬಾಂಬ್ ದಾಳಿ ನಿಲ್ಲಿಸಲು ಒತ್ತಾಯಿಸಬೇಕು ಎಂದಿದ್ದಾರೆ.
ಇಸ್ರೇಲ್ ದೇಶವು ಪ್ಯಾಲೆಸ್ತೀನ್ ಭಾಗವಾಗಿರುವ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿದೆ. ಇದು ಈ ಕೂಡಲೇ ನಿಲ್ಲಬೇಕು. ಯಹೂದಿ ರಾಷ್ಟ್ರಕ್ಕೆ ಮುಸ್ಲಿಂ ದೇಶಗಳಿಂದ ರಫ್ತಾಗುತ್ತಿರುವ ತೈಲ ಉತ್ಪನ್ನಗಳು ಹಾಗೂ ಆಹಾರ ಉತ್ಪನ್ನಗಳ ಸರಬರಾಜು ನಿಲ್ಲಬೇಕು ಎಂದು ಅಯತೊಲ್ಲಾ ಅಲಿ ಖಮೇನಿ ಆಗ್ರಹಿಸಿದ್ದಾರೆ. ಇರಾನ್ನ ಸರ್ಕಾರಿ ಮಾಧ್ಯಮದಲ್ಲಿ ಖಮೇನಿ ಭಾಷಣ ಪ್ರಸಾರವಾಗಿದೆ. ಈ ಭಾಷಣದಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಿಶ್ವದೆಲ್ಲೆಡೆಯ ಇಸ್ಲಾಂ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಗಾಜಾ ಪಟ್ಟಿಯಲ್ಲಿ ಇರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡಬೇಕು ಎಂದು ಇಸ್ರೇಲ್ ಶಪಥ ಮಾಡಿದ್ದು ನಿರಂತರ ದಾಳಿ ನಡೆಸುತ್ತಿದೆ. ಇರಾನ್ ಬೆಂಬಲಿತ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಒಮ್ಮೆಲೇ ದಾಳಿ ನಡೆಸಿದ್ದರು. ಜಲ, ನೆಲ, ವಾಯು ಮಾರ್ಗದಲ್ಲಿ ಇಸ್ರೇಲ್ಗೆ ಲಗ್ಗೆ ಇಟ್ಟಿದ್ದ ಉಗ್ರರು, 1,400ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳನ್ನು ಕೊಂದು ಹಾಕಿದ್ದರು. ಅಷ್ಟೇ ಅಲ್ಲ, 200ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಹಾಗೂ ವಿದೇಶೀಯರನ್ನು ಒತ್ತೆಯಾಳನ್ನಾಗಿಸಿ ಗಾಜಾ ಪಟ್ಟಿಗೆ ಕರೆದೊಯ್ದಿದ್ದು ಸುರಂಗದಲ್ಲಿ ಅಡಗಿಸಿಟ್ಟಿದ್ದಾರೆ. ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಈವರೆಗೆ 8 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಕಡೆಯವರು ಹೇಳುತ್ತಿದ್ದಾರೆ
Iran's supreme leader Ayatollah Ali Khamenei urged Muslim countries Wednesday to halt trade with Israel, including oil exports, in response to its bombardment of Gaza since deadly Hamas attacks
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 04:38 pm
Mangalore Correspondent
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am