ಬ್ರೇಕಿಂಗ್ ನ್ಯೂಸ್
06-11-23 08:43 pm HK News Desk ದೇಶ - ವಿದೇಶ
ಮುಂಬೈ, ನ.6: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಫೇಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜನಪ್ರಿಯ ನಟಿಯೊಬ್ಬರ ಮುಖವನ್ನು ನಕಲಿಸಿ ಈ ರೀತಿ ವಿಡಿಯೋ ಸೃಷ್ಟಿಸಿ ಮಾನ ಹರಾಜು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಜಾಲತಾಣದಲ್ಲಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಾರಾ ಪಟೇಲ್ ಎಂಬ ಹುಡುಗಿ ತನ್ನ ಇನ್ಸ್ ಟಾದಲ್ಲಿ ತೆರೆದೆದೆಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಅಕ್ಟೋಬರ್ 9ಕ್ಕೆ ಈ ವಿಡಿಯೋ ಷೇರ್ ಮಾಡಿದ್ದು ಅದರ ಬೆನ್ನಲ್ಲೇ ವೈರಲ್ ಆಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಈ ವಿಡಿಯೋವನ್ನು ಎಡಿಟ್ ಮಾಡಿ, ನಟಿ ರಶ್ಮಿಕಾ ಅವರ ಮುಖವನ್ನು ಕೂರಿಸಿದ್ದರು. ಥೇಟ್ ರಶ್ಮಿಕಾ ರೀತಿಯಲ್ಲೇ ದೇಹ ಭಾವ ಇದ್ದುದರಿಂದ ಆಕೆಯದ್ದೇ ವಿಡಿಯೋ ಎನ್ನುವಂತಿತ್ತು. ಜಿಮ್ ವರ್ಕೌಟ್ ಮಾಡಿ ಹೊರಬರುವ ರೀತಿಯಲ್ಲಿ ಎದೆಯ ಭಾಗ ಅರ್ಧ ತೆರೆದುಕೊಂಡಿದ್ದಕ್ಕೆ ಅಣಕ, ಟೀಕೆಯೂ ಬಂದಿತ್ತು. ಇದಕ್ಕೆ ಟೀಕೆ ಬರುತ್ತಲೇ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದು ಅದು ಫೇಕ್ ವಿಡಿಯೋ ಎಂದಿದ್ದಾರೆ.
ಈ ಬಗ್ಗೆ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿ ಪ್ರತಿಕ್ರಿಯಿಸಿ, ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದಿದ್ದಾರೆ. ಇದನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗುತ್ತಿದೆ. ಆದರೆ ಆನ್ಲೈನ್ನಲ್ಲಿ ಹರಡಿರುವ ನನ್ನ ಡೀಪ್ಫೇಕ್ ವೀಡಿಯೊದ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳುವುದಾದರೇ ತಂತ್ರಜ್ಞಾನದ ದುರುಪಯೋಗವು ಅತ್ಯಂತ ಭಯಾನಕ. ಇಂದು, ಮಹಿಳೆಯಾಗಿ ಮತ್ತು ನಟಿಯಾಗಿ, ನನ್ನ ರಕ್ಷಣೆ ಮತ್ತು ಬೆಂಬಲಕ್ಕೆ ಬಂದಿರುವ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಆದರೆ ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ನನಗೆ ಇದು ಸಂಭವಿಸಿದ್ದರೆ, ನಾನು ಇದನ್ನು ಹೇಗೆ ನಿಭಾಯಿಸಬಹುದು ಎಂದು ನಾನು ಊಹಿಸಲು ಸಾಧ್ಯವಿಲ್ಲ. ಡೀಪ್ ಫೇಕ್ ಮಾಡುವವರು ಇತರರ ಮೇಲೆ ಪ್ರಭಾವ ಬೀರುವುದಕ್ಕಿಂತ ಮುಂಚೆ ಅಂಥದ್ದನ್ನು ತಡೆಗಟ್ಟಬೇಕಿದೆ ಎಂದು ತಿಳಿಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರ ಬೆಂಬಲಕ್ಕೆ ಬಿಗ್ ಬಿ ಅಮಿತಾಭ್ ಬಚ್ಚನ್ ನಿಂತಿದ್ದು ಡೀಪ್ಫೇಕ್ ವೀಡಿಯೋ ಕುರಿತಂತೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ರಶ್ಮಿಕಾ ಅವರ ಮುಖ ಹೊಂದಿದ್ದ ಮಹಿಳೆಯೊಬ್ಬರು ಲಿಫ್ಟ್ ನಿಂದ ಹೊರ ಬರುತ್ತಿರುವ ವೀಡಿಯೋ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕಾನೂನು ಕ್ರಮಕ್ಕಾಗಿ ರಶ್ಮಿಕಾ ಅಭಿಮಾನಿಗಳು ಅಭಿಯಾನವನ್ನೇ ಆರಂಭಿಸಿದ್ದಾರೆ.
A video that supposedly shows actress Rashmika Mandanna entering an elevator has ignited a firestorm of controversy on the internet. What initially appears as genuine is, in fact, a ‘deepfake’ of the actress. The original video features a British Indian girl, Zara Patel, and her face was morphed to insert Mandana’s face instead.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am