ಬ್ರೇಕಿಂಗ್ ನ್ಯೂಸ್
09-11-23 05:08 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ನ.09: ಮಧ್ಯಪ್ರದೇಶದಲ್ಲಿ ಚಲಾವಣೆಯಾಗುವ ಪ್ರತಿಯೊಂದು ಮತವೂ ಕೂಡ 'ತ್ರಿಶಕ್ತಿ'ಗಳಿಗೆ ಬಲ ನೀಡಲಿದೆ. ಒಂದನೆಯದು, ಮಧ್ಯಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲಿದೆ. ಎರಡನೆಯದು, ಕೇಂದ್ರದಲ್ಲಿ ಪ್ರಧಾನಿಗೆ ಬಲ ತುಂಬಲಿದೆ. ಮೂರನೆಯದು, ರಾಜ್ಯದಲ್ಲಿ 'ಭ್ರಷ್ಟ' ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಉಳಿಸಲಿದೆ. ಇದರರ್ಥ ಒಂದು ಮತ, ಮೂರು ಅದ್ಭುತಗಳು. ಇದೊಂದು ರೀತಿ 'ತ್ರಿಶಕ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಮತ ಪ್ರಚಾರ ಸಭೆ ಉದ್ದೇಶಿಸಿ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆಗಳ ಪೈಕಿ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಮತದಾನ ನಡೆಯಲಿದೆ. ಇಂದು ಸತ್ನಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ''ನಮ್ಮ ಸರ್ಕಾರ ಬಡವರಿಗಾಗಿ ನಾಲ್ಕು ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಿದೆ. ಸತ್ನಾದಲ್ಲಿ ಬಡವರಿಗೆ 1.32 ಲಕ್ಷ ಮನೆಗಳು ದೊರೆತಿವೆ. ಆದರೆ, ನನಗಾಗಿ ಒಂದು ಮನೆಯನ್ನೂ ಮಾಡಿಕೊಳ್ಳಲಿಲ್ಲ'' ಎಂದರು.
ದೇಶದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಕಲಿ ಫಲಾನುಭವಿಗಳಿಗೆ ಕಡಿವಾಣ ಹಾಕಲಾಗಿದೆ. ಸರ್ಕಾರದ ಯೋಜನೆಗಳ ಲಾಭ ಪಡೆಯುತ್ತಿದ್ದ ಕಾಂಗ್ರೆಸ್ ಸೃಷ್ಟಿಸಿದ್ದ 10 ಕೋಟಿ ನಕಲಿ ಫಲಾನುಭವಿಗಳನ್ನು ದಾಖಲೆಗಳಿಂದ ತೆಗೆದುಹಾಕಲಾಗಿದೆ. ಅದಕ್ಕಾಗಿಯೇ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ನಿಂದಿಸುತ್ತಿದ್ದಾರೆ. ಏಕೆಂದರೆ, ನಮ್ಮ ಸರ್ಕಾರದ ಈ ಕ್ರಮದಿಂದ ಕಾಂಗ್ರೆಸ್ನವರಿಗೆ ಬಲವಾದ ಹೊಡೆತ ಬಿದ್ದಿದೆ. ಸರ್ಕಾರವು ಜನರ 2.75 ಲಕ್ಷ ಕೋಟಿ ಉಳಿತಾಯ ಮಾಡಿದೆ'' ಎಂದು ಮಾಹಿತಿ ನೀಡಿದರು.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ''ಇತ್ತೀಚಿನ ದಿನಗಳಲ್ಲಿ ನಾನು ಎಲ್ಲಿಗೆ ಹೋದರೂ ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಲಾಗುತ್ತಿದೆ. ದೇಶದೆಲ್ಲೆಡೆ ಸಂತಸದ ಅಲೆ ಎದ್ದಿದೆ. ಇದೇ ವೇಳೆ, ನಾವು ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಿದ್ದರೆ, 30,000 ಪಂಚಾಯತ್ ಕಟ್ಟಡಗಳನ್ನೂ ನಿರ್ಮಿಸಿದ್ದೇವೆ'' ಎಂದು ಹೇಳಿದರು.
ಮಂದುವರೆದು ಮಾತನಾಡಿ, ''ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದಿಂದಾಗಿ ಬಡವರಿಗೆ ಲಕ್ಷಗಟ್ಟಲೆ ಮನೆಗಳನ್ನು ನಿರ್ಮಿಸಿದ ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದು ಎಂಬುವುದೇ ನನಗೆ ಸಂತೋಷ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಾರಂಭವಾದ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ ನಂತರ ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸುವ ಸಂಕಲ್ಪವನ್ನೂ ನಾವು ಮಾಡಿದ್ದೇವೆ'' ಎಂದು ಮೋದಿ ವಿವರಿಸಿದರು.
ಬಳಿಕ ಕಾಂಗ್ರೆಸ್ ವಿರುದ್ಧದ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿದ್ದ ಹಣ ಎಲ್ಲಿಗೆ ಹೋಯಿತು? 2ಜಿ ಹಗರಣ, ಕಲ್ಲಿದ್ದಲು ಹಗರಣ, ಕಾಮನ್ವೆಲ್ತ್ ಹಗರಣಕ್ಕೆ ಹೋಯಿತು. ಆದರೆ, ನಮ್ಮ ಸರ್ಕಾರ ಆ ಎಲ್ಲಾ ಹಗರಣಗಳಿಗೆ ಕಡಿವಾಣ ಹಾಕಿತು. 10 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಬಡವರ ಖಾತೆಗಳಿಗೆ ರೂ.10 ಲಕ್ಷ ಕೋಟಿ ತಲುಪಿಸಿದೆ. ಕೊರೋನಾ ಸಮಯದಲ್ಲಿ ಸರ್ಕಾರ ಉಚಿತ ಪಡಿತರ ನೀಡುವ ಯೋಜನೆ ಆರಂಭಿಸಿತು. ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳ್ಳಲಿದೆ. ಯೋಜನೆ ಮುಂದುವರೆಸುವಂತೆ ಜನರು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಮುಂದಿನ 5 ವರ್ಷಗಳ ಕಾಲ ಯೋಜನೆ ಮುಂದುವರೆಸಲು ನಿರ್ಧರಿಸಲಾಗಿದೆ. ಇದು ಸತ್ನಾ ಜಿಲ್ಲೆಯ 4 ಲಕ್ಷ ಕುಟುಂಬಗಳಿಗೆ ಪಡಿತರ ಕುರಿತ ಚಿಂತೆಗಳನ್ನು ದೂರಾಗಿಸಲಿಗೆ ಎಂದು ಹೇಳಿದರು.
Satna, Madhya Pradesh: Prime Minister Narendra Modi on Thursday said every vote of the electorate in Madhya Pradesh has the power of “Trishakti”, to help the BJP form government again in MP, strengthen the PM at the Centre.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am