Deepotsav in Ayodhya, Uttar Pradesh: ಅಯೋಧ್ಯೆಯಲ್ಲಿ ದೀಪೋತ್ಸವ ; ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ, 24 ಲಕ್ಷ ದೀಪಗಳಿಂದ ಗಿನ್ನೆಸ್​ ದಾಖಲೆಗೆ ಸಜ್ಜು 

11-11-23 01:13 pm       HK News Desk   ದೇಶ - ವಿದೇಶ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ.

ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಆರ್.​ಎಸ್.​ಎಸ್​ ಸರಸಂಘಚಾಲಕ್​ ಮೋಹನ್​ ಭಾಗವತ್​ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ

ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್​ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್​ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.

UP: Ayodhya gears up for grand Deepotsav, 24 lakh 'diyas' to be lit on Ram  ki Pairi on Diwali eve | Up News – India TV

NB In List | 24 lakh diyas to light up on 51 ghats: Ayodhya gears up for  world record on Deepotsav - NewsBharati

Diwali 2023: Ayodhya gears up for spectacular Deepotsav; aims to set world  record | Nation - PTC News

ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :

ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್​ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.

Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.