ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.
ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
20-05-25 10:49 pm
Bangalore Correspondent
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
K S Eshwarappa: ಸೇನಾ ಕಾರ್ಯಾಚರಣೆ ಪ್ರಶ್ನಿಸುವ ದೇ...
20-05-25 07:18 pm
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
Shashi Kumar IPS, Corruption, Hubballi, polic...
19-05-25 04:00 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm