ಬ್ರೇಕಿಂಗ್ ನ್ಯೂಸ್
24-11-23 05:33 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ನ 24: ಏಕದಿನ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್ ಮಾರ್ಷ್ ವಿರುದ್ಧ ಭಾರತದಲ್ಲಿ ಎಫ್ಐಆರ್ ದಾಖಲಾಗಿದೆ.
ಉತ್ತರ ಪ್ರದೇಶದ ಅಲಿಘರ್ನ ಆರ್ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ನೀಡಿದ ದೂರಿನ ಮೇರೆಗೆ ದೆಹಲಿ ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
140 ಕೋಟಿ ಭಾರತೀಯರ ಭಾವನೆಗಳಿಗೆ ಧಕ್ಕೆ ;
ಮಾರ್ಷ್ ಅವರು ವಿಶ್ವಕಪ್ ಗೆದ್ದ ಬಳಿಕ ಡ್ರೆಸ್ಸಿಂಗ್ ರೂಮ್ನಲ್ಲಿ ಟ್ರೋಫಿ ಮೇಲೆ ತಮ್ಮ ಕಾಲುಗಳನ್ನು ಇಟ್ಟು ವಿಶ್ರಾಂತಿ ಪಡೆಯುವ ಶೈಲಿಯಲ್ಲಿ ಕುಳಿತ ಫೋಟೊವೊಂದು ವೈರಲ್ ಆಗಿತ್ತು. ಈ ಫೋಟೊ ಕಂಡ ಅನಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು, ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಪಂಡಿತ್ ಕೇಶವ್ ಅವರು 140 ಕೋಟಿ ಭಾರತೀಯರ ಭಾವನೆಗಳಿಗೆ ಮಾರ್ಷ್ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೇಸರ ವ್ಯಕ್ತಪಡಿಸಿದ್ದ ಶಮಿ ;
ಈ ಬಾರಿಯ ವಿಶ್ವಕಪ್ನಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಟೀಮ್ ಇಂಡಿಯಾದ ಬೌಲರ್ ಮೊಹಮ್ಮದ್ ಶಮಿ ಕೂಡ ಮಾರ್ಷ್ ಅವರ ಈ ಉದ್ದಟತನಕ್ಕೆ ಟೀಕೆ ಮತ್ತು ಬೇಸರ ವ್ಯಕ್ತಪಡಿಸಿದ್ದರು. ನಿಜಕ್ಕೂ ಮಾರ್ಷ್ ಅವರ ಈ ನಡೆ ತುಂಬಾ ನೋವಾಯಿತು ಎಂದಿದ್ದರು.
ವಿಶ್ವಕಪ್ ಪ್ರದರ್ಶನದ ಕುರಿತು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಶಮಿ ಅವರು ಮಿಚೆಲ್ ಮಾರ್ಷ್ ನಡೆಯನ್ನು ಕುಟುವಾಗಿ ಟೀಕಿಸಿದ್ದಾರೆ. "ನನಗೆ ತುಂಬಾ ಬೇಸರವಾಯಿತು. ವಿಶ್ವದ ಎಲ್ಲ ತಂಡಗಳು ಈ ಟ್ರೋಫಿಗಾಗಿ ಹೋರಾಡುತ್ತವೆ. ಗೆದ್ದರೆ ಟ್ರೋಫಿಯನ್ನು ತಲೆಯ ಮೇಲೆ ಹೊತ್ತು ಸಂಭ್ರಮಿಸಲು ಬಯಸುತ್ತಾರೆ. ಹೀಗಿರುವಾಗ ಈ ಪ್ರತಿಷ್ಠಿತ ಟ್ರೋಫಿ ಮೇಲೆ ಕಾಲು ಇಟ್ಟಿದ್ದು, ನನಗೆ ಸಂತೋಷ ನೀಡಲಿಲ್ಲ. ಇದು ಕ್ರಿಕೆಟ್ಗೆ ಮಾಡಿದ ಅವಮಾನ" ಎಂದು ಶಮಿ ಹೇಳಿದ್ದರು.
ಭಾನುವಾರ ನರೇಂದ್ರ ಮೋದಿ ಕ್ರಿಕೆಟ್ ಸ್ಟಡಿಯಂನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 240 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್ 137 ರನ್ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.
A First Information Report (FIR) has been filed against Australian cricketer Mitchell Marsh, who drew flake after a photo of him resting feet on the World Cup Trophy went viral. RTI activist Pandit Keshav of Aligarh filed a written complaint at Delhi Gate police station against Mitchell Marsh alleging that the cricketer has hurt the sentiments of Indians trough such photo. He alleged that this is not only an insult to the coveted trophy alone but also to the honour of 140 crore Indians.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm