ಬ್ರೇಕಿಂಗ್ ನ್ಯೂಸ್
26-11-23 12:06 pm HK NEWS DESK ದೇಶ - ವಿದೇಶ
ಕೊಚ್ಚಿ, ನ 26: ಕೇರಳದ ಕೊಚ್ಚಿ ವಿಶ್ವವಿದ್ಯಾಲಯದಲ್ಲಿ ನಡೆದ ಟೆಕ್ ಫೆಸ್ಟ್ನಲ್ಲಿ ಕಾಲ್ತುಳಿತ ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರನ್ನು ಗುರುತಿಸಲಾಗಿದೆ. ಕೂತತುಕುಲಂನಿಂದ ಅತುಲ್ ತಂಬಿ ಮತ್ತು ಉತ್ತರ ಪರವೂರಿದ ಅಂದ್ರಿಫ್ತಾ ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ
ಇಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ಆಯೋಜಿಸಲಾಗಿತ್ತು. ಸಭಾಂಗಣದಲ್ಲಿ ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಲ್ಲಿಯ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಗಾಯನ ವೇಳೆ ವಿದ್ಯಾರ್ಥಿಗಳು ಸಭಾಂಗಣದಲ್ಲಿ ನೃತ್ಯ ಮಾಡುತ್ತಿದ್ದರು. ಇದೇ ವೇಳೆ, ದಿಢೀರ್ ಮಳೆ ಸುರಿದಿದ್ದರಿಂದ ಹೊರಗಿದ್ದ ವಿದ್ಯಾರ್ಥಿಗಳು ಏಕಾಏಕಿ ಸಭಾಂಗಣ ಒಳಗೆ ಓಡಿ ಹೋಗಲು ಆರಂಭಿಸಿದ್ದಾರೆ. ಪರಿಣಾಮ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಟೆಕ್ ಫೆಸ್ಟ್ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ ವಿದ್ಯಾರ್ಥಿಗಳ ಕಾಲ್ತುಳಿತ ಉಂಟಾಗಿದೆ. ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಕೊಚ್ಚಿ ವಿಶ್ವವಿದ್ಯಾಲಯದ ವೈಸ್ ಚಾನ್ಸೆಲರ್ ಡಾ. ಶಂಕರನ್ ಮಾತನಾಡಿ, ಟೆಕ್ ಫೆಸ್ಟ್ ಅಂಗವಾಗಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿರ್ಗಳು ಭಾಗಿಯಾಗಿದ್ದರು. ಮಳೆಯಿಂದ ವಿದ್ಯಾರ್ಥಿಗಳು ಸಭಾಂಗಣದೊಳಗೆ ಬರಲು ಮುಂದಾದ ವೇಳೆ ನೂಕುನುಗ್ಗಲು ಉಂಟಾಗಿ ಕೆಲ ವಿದ್ಯಾರ್ಥಿಗಳು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
Four students were killed, and over 60 were injured in a stampede during Cochin university annual festival here on November 25 night, police said. Officials said that the stampede occurred before well known singer Nikita Gandhi was to perform for a musical festival in the open air auditorium of Cochin University of Science and Technology (CUSAT) here.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm