ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm