ಬ್ರೇಕಿಂಗ್ ನ್ಯೂಸ್
06-12-23 05:06 pm HK News Desk ದೇಶ - ವಿದೇಶ
ಲಕ್ನೋ, ಡಿ 06: ರೈಲ್ವೇಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ.
ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.
ಮಿರ್ಜಾಪುರದ ನಿವಾಸಿಯಾಗಿರುವ ಡಾ.ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು.
ಕಳೆದ ಭಾನುವಾರ ನೆರೆಹೊರೆಯವರಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಆ ಬಳಿಕ ಯಾರ ಕಣ್ಣಿಗೂ ಈ ಕುಟುಂಬ ಸದಸ್ಯರು ಕಾಣಲಿಲ್ಲ ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಹಾಗೂ ವೈದ್ಯರ ಸಹೋದ್ಯೋಗಿಗಳು ಮನೆಯ ಬಳಿ ಬಂದು ಬೆಲ್ ಮಾಡಿದ್ದಾರೆ ಆದರೆ ಮನೆಯ ಒಳಗಿಂದ ಯಾವುದೇ ಸದ್ದು ಕೇಳಿಸಲಿಲ್ಲ ಆದರೆ ಮನೆಯ ಒಳಗಿನಿಂದ ಬಾಗಿಲು ಹಾಕಿತ್ತು ಇದನ್ನು ಕಂಡು ಸಂಶಗೊಂಡ ಸಹೋದ್ಯೋಗಿಗಳು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಒಳಗೆ ವೈದ್ಯ, ಅವರ ಪತ್ನಿ ಅರ್ಚನಾ, ಮಗಳು ಆದಿವಾ (12) ಮತ್ತು ಮಗ ಆರವ್ (40) ಅವರ ಮೃತದೇಹ ಪತ್ತೆಯಾಗಿದೆ.
ಆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತದೇಹದ ಬಳಿ ಸುತ್ತಿಗೆ, ರಕ್ತದ ಕಲೆಗಳು ಮತ್ತು ಡ್ರಗ್ ಇಂಜೆಕ್ಷನ್ಗಳು ಪತ್ತೆಯಾಗಿದ್ದು ಪೊಲೀಸರ ಮಾಹಿತಿಯಂತೆ ವೈದ್ಯರು ಮೊದಲು ಮಕ್ಕಳು ಹಾಗೂ ಪತ್ನಿಗೆ ಅಮಲು ಬರುವ ಇಂಜೆಕ್ಷನ್ ನೀಡಿ ಬಳಿಕ ಸುತ್ತಿಗೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿರಬೇಕು ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ರಾಯ್ ಬರೇಲಿ ಎಸ್ಪಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ.
ನೆರೆಹೊರೆಯವರ ಪ್ರಕಾರ ಕೌಟುಂಬಿಕ ಸಮಸ್ಯೆ ಇದ್ದಿರಬಹುದು ಆದರೆ ರೋಗಿಗಳಿಗೆ ಮತ್ತು ನೆರೆಹೊರೆಯವರೊಂದಿಗೆ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದರು ಕೆಲವೊಮ್ಮೆ ಕೋಪಗೊಳ್ಳುತ್ತಿದ್ದರು ಖಿನ್ನತೆಗೆ ಒಳಗಾಗುತ್ತಿದ್ದರು ಇದೇ ಖಿನ್ನತೆಯಿಂದ ಈ ರೀತಿಯ ಕೃತ್ಯ ಎಸಗಿರಲು ಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
A doctor in Uttar Pradesh's Rae Bareli killed his wife and two children, and later died by suicide. The incident was reported late on Tuesday, when the doctor, an eye specialist at the Modern Rail Coach Factory Hospital, and his family did not respond to phone calls by one of his colleagues.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm