ಬ್ರೇಕಿಂಗ್ ನ್ಯೂಸ್
08-12-23 01:50 pm HK News Desk ದೇಶ - ವಿದೇಶ
ನವದೆಹಲಿ, ಡಿ.8; ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಐದು ದಿನಗಳ ನಂತರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಪಕ್ಷದ ವೀಕ್ಷಕರನ್ನು ನೇಮಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ ಮತ್ತು ಸರೋಜ್ ಪಾಂಡೆ ಅವರನ್ನು ರಾಜಸ್ಥಾನದ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಮಧ್ಯಪ್ರದೇಶಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಸರ್ಬಾನಂದ ಸೋನೋವಾಲ್ ಮತ್ತು ದುಷ್ಯಂತ್ ಗೌತಮ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಯಲ್ಲಿ ಹೊಸಬರಿಗೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗಿದೆ. ಭವಿಷ್ಯದ ನಾಯಕರನ್ನು ರೂಪಿಸಲು ಇದು ಸಕಾಲ ಎಂದು ಭಾವಿಸಿರುವ ಕೇಂದ್ರ ನಾಯಕರು, ಮೂರು ರಾಜ್ಯಗಳಲ್ಲಿ ಹಳಬರಿಗೆ ಕೊಕ್ ಕೊಟ್ಟು ಹೊಸ ಮುಖಗಳಿಗೆ ಅವಕಾಶ ನೀಡಲಿದ್ದಾರೆ. ಇದಕ್ಕಾಗಿ ಈ ರಾಜ್ಯಗಳಿಗೆ ಬರಲಿರುವ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಹೊಸ ಮುಖಕ್ಕೆ ಅವಕಾಶ ನೀಡುವ ಬಗ್ಗೆ ಶಾಸಕರ ಮನವೊಲಿಕೆ ಮಾಡಲಿದ್ದಾರೆ.
ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಕೈಯಲ್ಲಿದ್ದ ಅಧಿಕಾರವನ್ನು ಬಿಜೆಪಿ ಕಸಿದುಕೊಂಡಿದ್ದು ಗೆಲುವಿನ ಉತ್ಸಾಹದಲ್ಲಿದೆ. ಆದರೆ ಪ್ರಾದೇಶಿಕವಾಗಿ ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವರಿದ್ದು ಅವರನ್ನು ಮನವೊಲಿಸುವ ಕೆಲಸವೂ ಆಗಬೇಕಾಗಿದೆ. ಬಿಜೆಪಿ ಮಧ್ಯ ಭಾರತದ ಹಿಂದಿ ಹಾರ್ಟ್ ಲ್ಯಾಂಡ್ ನಲ್ಲಿ ಹಿಡಿತ ಬಿಗಿಗೊಳಿಸಿರುವುದು ಈ ಚುನಾವಣೆಯಲ್ಲಿ ಸ್ಪಷ್ಟವಾಗಿದ್ದು ಲೋಕಸಭೆಗೆ ತಯಾರಾಗುತ್ತಿರುವ ಬಿಜೆಪಿಗೆ ಟಾನಿಕ್ ಸಿಕ್ಕಂತಾಗಿದೆ.
Five days after the declaration of Assembly election results in four states, the Bharatiya Janata Party on Friday announced the appointment of observers for three states –Rajasthan, Madhya Pradesh and Chhattisgarh– where the party emerged victorious in the recently-concluded Assembly elections.
21-05-25 02:35 pm
Bangalore Correspondent
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
Darshan, Pavitra, Court case: ರೇಣುಕಾಸ್ವಾಮಿ ಹತ...
20-05-25 10:49 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm