ಬ್ರೇಕಿಂಗ್ ನ್ಯೂಸ್
11-12-23 12:29 pm HK News Desk ದೇಶ - ವಿದೇಶ
ಪಟ್ಟಣಂತಿಟ್ಟ, ಡಿ 11: ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 11 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.
ಮೂರು ವರ್ಷದಿಂದಲೂ ಹೃದಯ ಸಂಬಂಧಿ ರೋಗದ ವಿರುದ್ಧ ಹೋರಾಡುತ್ತಿದ್ದ ಬಾಲಕಿ ಯಾತ್ರಾರ್ಥಿಗಳ ಭಾರಿ ನೂಕುನುಗ್ಗಲಿನ ನಡುವೆ ಕುಸಿದುಬಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಹೆಸರಾಂತ ಶಬರಿಮಲೆ ದೇವಸ್ಥಾನಕ್ಕೆ ಪ್ರಸ್ತುತ ಭಕ್ತಾದಿಗಳ ದಂಡು ಹರಿದು ಬರುತ್ತಿದೆ. ಕೆಲವು ಯಾತ್ರಾರ್ಥಿಗಳು 18 ಗಂಟೆಗಳವರೆಗೆ ದರ್ಶನಕ್ಕಾಗಿ ಕಾಯುತ್ತಿದ್ದರು, ಅನೇಕರು ಸರತಿ ವ್ಯವಸ್ಥೆಯನ್ನು ಉಲ್ಲಂಘಿಸಿದ್ದರಿಂದ ಅವ್ಯವಸ್ಥೆಗೆ ಕಾರಣವಾಯಿತು.
ದೀರ್ಘ ಸರತಿ ಸಾಲಿನ ಕಾರಣದಿಂದಾಗಿ, ಯಾತ್ರಿಕರು ಬ್ಯಾರಿಕೇಡ್ ಗಳ ಮೇಲೆ ಹಾರಿ, ಪವಿತ್ರ ಮೆಟ್ಟಿಲುಗಳ ಬಳಿ ನೂಕುನುಗ್ಗಲು ಉಂಟುಮಾಡಿದರು. ಹೆಚ್ಚುತ್ತಿರುವ ಜನಸಂದಣಿಯ ಕಾರಣದಿಂದಾಗಿ, ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ಮತ್ತು ತಿರುವಾಂಕೂರ್ ದೇವಸ್ವಂ ಮಂಡಳಿ ಅಧ್ಯಕ್ಷ ಪಿ ಎಸ್ ಪ್ರಶಾಂತ್ ತುರ್ತು ಸಭೆಯನ್ನು ಕರೆದಿದ್ದಾರೆ.
ಹೆಚ್ಚಿದ ಭಕ್ತರ ಸಂಖ್ಯೆ; ದರ್ಶನ ಸಮಯ 1 ಗಂಟೆ ಹೆಚ್ಚಳ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಹೆಚ್ಚಿದ ಕಾರಣ ದೇವರ ದರ್ಶನದ ಸಮಯವನ್ನು 1 ಗಂಟೆ ಹೆಚ್ಚಿಸಲು ತಿರವಾಂಕೂರು ದೇವಸ್ಥಾನ ಮಂಡಳಿ(ಟಿಡಿಬಿ) ನಿರ್ಧರಿಸಿದೆ.
ಮಧ್ಯಾಹ್ನ 4ರಿಂದ ರಾತ್ರಿ 11ರವರೆಗೆ ಬದಲಾಗಿ ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮಂಡಳಿ ತಿಳಿಸಿದೆ.
ಈ ನಡುವೆ, ದೇವರ ದರ್ಶನಕ್ಕಾಗಿ ಭಕ್ತರು 15 ರಿಂದ 20 ಗಂಟೆಗಳ ಕಾಲ ಸರದಿಯಲ್ಲಿ ಕಾಯಬೇಕು. ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಪೊಲೀಸ್ ಸಿಬ್ಬಂದಿಯನ್ನೂ ನೇಮಿಸಿಲ್ಲ. ಭಕ್ತರ ಹಿತರಕ್ಷಣೆಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ನ ಮಾರ್ಗಸೂಚಿಗಳನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ವಿ. ಡಿ. ಸಥೇಶನ್ ಆರೋಪಿಸಿದ್ದರು.
An 11-year-old girl from Tamil Nadu died of a heart ailment on Saturday while waiting in the long queue for darshan at Kerala's Sabarimala temple. The girl, who had been battling the disease since the age of three, collapsed amid the heavy rush of pilgrims and was pronounced dead at a hospital.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm