ಬ್ರೇಕಿಂಗ್ ನ್ಯೂಸ್
14-12-23 06:15 pm HK News Desk ದೇಶ - ವಿದೇಶ
ನವದೆಹಲಿ, ಡಿ.14: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸಿಡಿಸಿ ಭದ್ರತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದೇ ಘಟನೆ ನಡೆದಿದ್ದು ದೇಶಾದ್ಯಂತ ತೀವ್ರ ಖಂಡನೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಸಂಸತ್ತಿನ ಹೊರಗೆ ಹಲವು ದಿನಗಳಿಂದ ಪೂರ್ವಾಭ್ಯಾಸ ನಡೆಸಿದ್ದರು. ಎಲ್ಲಾ ಆರೋಪಿಗಳು 'ಭಗತ್ ಸಿಂಗ್ ಫ್ಯಾನ್ ಕ್ಲಬ್' ಎಂಬ ಸಾಮಾಜಿಕ ಮಾಧ್ಯಮ ಪುಟದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ.
ಸುಮಾರು ಒಂದೂವರೆ ವರ್ಷಗಳ ಹಿಂದೆ ಎಲ್ಲರೂ ಮೈಸೂರಿನಲ್ಲಿ ಭೇಟಿಯಾಗಿದ್ದಾರೆ. ಜುಲೈನಲ್ಲಿ ಸಾಗರ್ ಲಕ್ನೋದಿಂದ ಬಂದಿದ್ದ. ಆದರೆ ಸಂಸತ್ ಭವನವನ್ನು ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್ 10 ರಂದು ಎಲ್ಲರೂ ತಮ್ಮ ತಮ್ಮ ರಾಜ್ಯಗಳಿಂದ ದೆಹಲಿ ತಲುಪಿದ್ದರು.
ನಂತರ ಇಂಡಿಯಾ ಗೇಟ್ ಬಳಿ ಒಟ್ಟು ಸೇರಿ ಬಣ್ಣದ ಪಟಾಕಿಗಳನ್ನು ಖರೀದಿಸಿದ್ದರು ಎಂದು ಮೂಲಗಳು ತಿಳಿಸಿವೆ. ಗೃಹ ವ್ಯವಹಾರಗಳ ಸಚಿವಾಲಯ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಸಿಆರ್ಪಿಎಫ್ ಡಿಜಿ ಅನೀಶ್ ದಯಾಳ್ ಸಿಂಗ್ ಅವರ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳು ಮತ್ತು ತಜ್ಞರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದ ಎಂದು ಗೃಹ ಸಚಿವಾಲಯ ತಿಳಿಸಿದೆ.
ಭದ್ರತಾ ಲೋಪ ಘಟನೆ ಬಳಿಕ ಹೊಸ ಕಟ್ಟಡವನ್ನು ಪ್ರವೇಶಿಸಲು ತಮ್ಮ 'ಸ್ಮಾರ್ಟ್ ಕಾರ್ಡ್'ಗಳನ್ನು ಸಿದ್ಧಪಡಿಸುವಂತೆ ಲೋಕಸಭೆಯ ಸೆಕ್ರೆಟರಿಯೇಟ್ ಬುಧವಾರ ಸಂಸದರಿಗೆ ಸೂಚಿಸಿದೆ. ಕಟ್ಟಡದ ಗೇಟ್, ಲೋಕಸಭೆ ಮತ್ತು ರಾಜ್ಯಸಭೆಯ ಲಾಬಿಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಯ ಸಹಾಯದಿಂದ ಸಂಸತ್ ಭವನಕ್ಕೆ ಪ್ರವೇಶ ನೀಡಲಾಗುತ್ತಿದೆ. ಸಂಸತ್ತು ಭವನ ಹೊರಗೆ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಪೊಲೀಸರು ಆವರಣ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ಮಾಡಿ ಒಳಗೆ ಕಳುಹಿಸುತ್ತಿದ್ದಾರೆ.
A shocking incident happened in the Parliament on Wednesday wherein two people jumped into the Lok Sabha chamber from the public gallery during Zero Hour, released yellow gas from canisters, and shouted slogans before being overpowered by the MPs.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm