ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm