ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.

ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm