ಬ್ರೇಕಿಂಗ್ ನ್ಯೂಸ್
20-12-23 01:11 pm HK News Desk ದೇಶ - ವಿದೇಶ
ಲಕ್ನೋ, ಡಿ.20: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ ಅಧಿಕೃತ ಆಹ್ವಾನ ನೀಡಿದೆ.
ಸಾಕಷ್ಟು ಸ್ವಾಮೀಜಿಗಳಿಗೆ ಹಾಗೂ ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದರೂ ರಾಮಮಂದಿರಕ್ಕಾಗಿ ನಡೆಸಿದ್ದ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಆಡ್ವಾಣಿ ಮತ್ತು ಜೋಶಿ ಇಬ್ಬರನ್ನು ವಯಸ್ಸಿನ ಕಾರಣ ಹೇಳಿ ದೂರ ಇರಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಇಬ್ಬರೂ ನಾಯಕರಿಗೆ ವಿಎಚ್ ಪಿ ಕಡೆಯಿಂದ ಆಹ್ವಾನ ನೀಡಲಾಗಿದೆ.
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಆಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಎಚ್ ಪಿ ಪ್ರಮುಖರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಡ್ವಾಣಿ (96) ಮತ್ತು ಮುರಳಿ ಮನೋಹರ್ ಜೋಷಿ (89) ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂದಿನ ತಿಂಗಳ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ. ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿದೆ, ಅದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ದೇವಸ್ಥಾನದ ಟ್ರಸ್ಟಿ ಚಂಪತ್ ರಾಯ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಭಾರೀ ಟೀಕೆ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಆ ಇಬ್ಬರು ನಾಯಕರನ್ನು ರಾಮ ಮಂದಿರ ಉದ್ಘಾಟನೆಗೆ ಕರೆಸಲು ಮುಂದಾಗಿದೆ.
BJP veterans L K Advani and Murli Manohar Joshi were invited by the Vishva Hindu Parishad (VHP) to attend the consecration ceremony of the Ram Temple in Ayodhya next month. Both Advani and Joshi were at the forefront of the agitation for the Ram temple.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm