ಬ್ರೇಕಿಂಗ್ ನ್ಯೂಸ್
21-12-23 01:16 pm HK News Desk ದೇಶ - ವಿದೇಶ
ಚೆನ್ನೈ, ಡಿ.21: 1.75 ಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಪತಿಗಳಿಗೆ ತಲಾ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.
2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಸುಮಾರು 65.99% ಕ್ಕೂ ಹೆಚ್ಚಿನ ಆದಾಯ ಗಳಿಸಿದ್ದರು.
ಖೇಚ್ಚಿನ ಆದಾಯ ಗಳಿಸಿದ್ದರೂ 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಮಂಗಳವಾರ, ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧದ ಆರೋಪವು ಇಬ್ಬರೂ ಆರೋಪಿಗಳ ವಿರುದ್ಧ ಸಾಬೀತಾಗಿದೆ.
ಸದ್ಯ ಪೊನ್ಮುಡಿಯ ಉನ್ನತ ಶಿಕ್ಷಣ ಖಾತೆಯನ್ನು ಅವರ ಸಹೋದ್ಯೋಗಿಗಳಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಕಾನೂನಿನಡಿಯಲ್ಲಿ, ಶಾಸಕಾಂಗ ವ್ಯವಸ್ಥೆಯ ಸದಸ್ಯರು ತಪ್ಪಿತಸ್ಥರಾದರೆ ಸಂಸತ್ತು ಅಥವಾ ವಿಧಾನಸಭೆಯಿಂದ ಅವರು ಅನರ್ಹರಾಗುತ್ತಾರೆ.
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ ಮರುದಿನವೇ ಪೊನ್ಮುಡಿಯವರಿಗೆ ಈ ಶಿಕ್ಷೆ ವಿಧಿಸಲಾಗಿದೆ.
1996ರಿಂದ 2001ರ ವರೆಗಿನ ಡಿಎಂಕೆ ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪೊನ್ಮುಡಿ ಪ್ರಕರಣವು ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷವನ್ನು ಹೆಚ್ಚಿಸಿತ್ತು.
On Tuesday, the Madras High Court convicted Ponmudy and his wife in the case, setting aside a trial court’s order which acquitted them. The case pertains to Ponmudy (72) amassing wealth disproportionately to the tune of ₹1.75 crore in his name and in the name of his wife which was 65.99% more than his known sources of income when he was a minister in the DMK-led regime during 2006 to 2011.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm