ಬ್ರೇಕಿಂಗ್ ನ್ಯೂಸ್
23-12-23 07:15 pm HK News Desk ದೇಶ - ವಿದೇಶ
ನವದೆಹಲಿ, ಡಿ.23: ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ ಸಿಂಗ್ ಆಪ್ತ ಆಯ್ಕೆಯಾಗಿರುವುದನ್ನು ವಿರೋಧಿಸಿ ಮತ್ತೊಬ್ಬ ಕುಸ್ತಿ ಪಟು ವೀರೇಂದ್ರ ಸಿಂಗ್ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿಕೆ ನೀಡಿದ್ದಾರೆ. ತಾನು ಕ್ರೀಡೆಯನ್ನೇ ತ್ಯಜಿಸುತ್ತೇನೆ ಎಂದು ಹೇಳಿದ್ದ ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ತಾನು ಪದ್ಮಶ್ರೀ ಹಿಂತಿರುಗಿಸುತ್ತೇನೆ ಎಂದಿದ್ದಾರೆ.
ನಿನ್ನೆ ಸಾಕ್ಷಿ ಮಲಿಕ್ ಹೇಳಿಕೆಯ ಬೆನ್ನಲ್ಲೇ ಕುಸ್ತಿ ಪಟು ಬಜರಂಗ್ ಪುನಿಯಾ ತನ್ನ ಪದ್ಮಶ್ರೀ ಹಿಂತಿರುಗಿಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದರು. ಇದೀಗ ಸಾಕ್ಷಿ ಮಲಿಕ್ ಬೆಂಬಲಿಸಿ ತನ್ನನ್ನು ಗೂಂಗಾ ಪೈಲ್ವಾನ್ ಎಂದೇ ಗುರುತಿಸಿಕೊಳ್ಳುವ ವೀರೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ತನ್ನ ಪೋಸ್ಟ್ ಅನ್ನು ಸಚಿನ್ ತೆಂಡುಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ತನ್ನ ಪೋಸ್ಟ್ ಅನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಬರೆದಿದ್ದಾರೆ.
ಹೊಸತಾಗಿ ಕುಸ್ತಿ ಫೆಡರೇಶನ್ ಅಧ್ಯಕ್ಷನಾಗಿರುವ ಸಂಜಯ್ ಸಿಂಗ್ ಈ ಹಿಂದೆ ಬ್ರಿಜ್ ಭೂಷಣ ಸಿಂಗ್ ಅವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ತೀವ್ರ ವಿರೋಧ ಕೇಳಿಬಂದ ಬಳಿಕ ಕುಸ್ತಿ ಒಕ್ಕೂಟದ ಅಧ್ಯಕ್ಷ ಹುದ್ದೆಯಿಂದ ಹಿಂದೆ ಸರಿದಿದ್ದ ಬ್ರಿಜ್ ಭೂಷಣ್ ಸಿಂಗ್ ಇದೀಗ ತನ್ನ ಸಹಾಯಕನನ್ನೇ ಆ ಹುದ್ದೆಗೇರಿಸಿದ್ದಾರೆ. ಆದರೆ ಕುಸ್ತಿ ಪಟುಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಬ್ರಿಜ್ ಭೂಷಣ್ ಸಿಂಗ್ ಉತ್ತರ ಪ್ರದೇಶದಿಂದ ಆರು ಬಾರಿ ಸಂಸದರಾಗಿದ್ದಾರೆ.
A day after Bajrang Punia returned his Padma Shri Award to Prime Minister Narendra Modi, 2005 Summer Deaflympics gold medal winner Virender Singh Yadav announced he will do the same as a protest after Brij Bhushan Singh’s close aide Sanjay Singh was elected as the President of Wrestling Federation of India (WFI).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm