ಬ್ರೇಕಿಂಗ್ ನ್ಯೂಸ್
26-12-23 01:21 pm HK News Desk ದೇಶ - ವಿದೇಶ
ಭೋಪಾಲ್, ಡಿ 26: ಗುಜರಿ ತುಂಬಿದ ಟ್ರಕ್ ಕಾರೊಂದರ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುನಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಜ್‌ಗಢ್ ಜಿಲ್ಲೆಯ ದಂಪತಿಗಳು ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಘಟನೆಯಲ್ಲಿ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 46 ರಲ್ಲಿ ಕುಟುಂಬದ ಸದಸ್ಯರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಜರಿ ತುಂಬಿದ ಟ್ರಕ್ ವೊಂದು ಕಾರನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರಿನ ಮೇಲೆಯೇ ಬಿದ್ದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಆದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣತೆತ್ತಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಟ್ರಕ್ 40 ಟನ್‌ಗಳಿಗಿಂತ ಹೆಚ್ಚು ಗುಜರಿಯನ್ನು ಹೊತ್ತೊಯ್ಯುತ್ತಿತ್ತು. ರಸ್ತೆಯಲ್ಲಿ ಮಂಜು ಆವರಿಸಿದ್ದ ಕಾರಣದಿಂದ ಸರಿಯಾಗಿ ಮಾರ್ಗ ಗೋಚರಿಸದೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೊಲೀಸರು ಕಾರಿನ ನೋಂದಣಿ ಸಂಖ್ಯೆಯ ಸಹಾಯದಿಂದ ಮೃತ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಟ್ರಕ್ ತುಂಬಾ ಭಾರವಾಗಿದ್ದರಿಂದ ಪೊಲೀಸರು ಅದನ್ನು ಮೇಲೆತ್ತಲು ಕ್ರೇನ್ ಮತ್ತು ಗುಜರಿಯನ್ನು ತೆಗೆಯಲು ಜೆಸಿಬಿ ಯಂತ್ರವನ್ನು ಬಳಸಿದ್ದಾರೆ.
ಗುಜರಿಯನ್ನು ತೆಗೆದ ನಂತರವೇ ಟ್ರಕ್ ನ್ನು ಚಲಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.
In a tragic incident, four members of a family were killed and two sustained grave injuries after a scrap-laden truck fell on their car in Madhya Pradesh’s Guna district early on Tuesday. As per the reports, the scrap-laden truck lost control and fell on the car when it tried to overtake the vehicle. The police also said that high speed and poor visibility due to heavy fog on the National Highway (NH-46) led to the tragic accident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm