ಬ್ರೇಕಿಂಗ್ ನ್ಯೂಸ್
28-12-23 02:23 pm HK News Desk ದೇಶ - ವಿದೇಶ
ಗುನಾ, ಡಿ.28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.
ಈ ಘಟನೆ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 17 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗುನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.
ಪ್ರಸ್ತುತ 17 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ, ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತದೇಹಗಳು ಬೆಂಕಿಯಲ್ಲಿ ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು. ಅಪಘಾತ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲು ಪರಿಶೀಲನೆ ಡೆಯುತ್ತಿದೆ ಎಂದು ಅವರು ಹೇಳಿದರು. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
"ನಾವು ಆರೋನ್ ಕಡೆಗೆ ಹೋಗುತ್ತಿದ್ದೆವು. ಡಂಪರ್‌ಗೆ ಡಿಕ್ಕಿ ಹೊಡೆದ ಸದ್ದು, ಬಾಂಬ್ ಸ್ಫೋಟದಂತೆ ಕೇಳಿಸಿತ್ತು. ಬಸ್ ಉರುಳಿಬಿದ್ದು, ಬೆಂಕಿಯ ಜ್ವಾಲೆ ಎಲ್ಲಾ ಕಡೆ ಆವರಿಸಿತು. ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದರು. ನನ್ನ ಮಗಳನ್ನು ಕಾಪಾಡುವುದು ಸಾಧ್ಯವಾಗಲಿಲ್ಲ" ಎಂದು ಈ ಭಯಾನಕ ಘಟನೆಯಲ್ಲಿ ಮಗಳನ್ನು ಕಳೆದುಕೊಂಡ ಪ್ರಯಾಣಿಕ ಶ್ರೀರಾಮ್ ಓಝಾ ಕಣ್ಣೀರಿಟ್ಟರು.
At least 12 people were killed after a passenger bus caught fire following its collision with a dumper in Madhya Pradesh's Guna. The accident happened in the wee hours of Thursday on the Guna-Aaron road.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm