ಬ್ರೇಕಿಂಗ್ ನ್ಯೂಸ್
03-01-24 11:07 am HK News Desk ದೇಶ - ವಿದೇಶ
ಅಸ್ಸಾಂ, ಜ 03: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ಧ ಟ್ರಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ದುರ್ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ದೇರ್ಗಾಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್, ಸರಕು ಸಾಗಣೆ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೇನ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.


'ಅಪಘಾತದಲ್ಲಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಅವರು ಹೇಳಿದ್ದಾರೆ.
ಅಪಘಾತ ಸಂಬಂಧ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಗಾಯಗೊಂಡ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಜೋರ್ಹಾಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30ರ ಸುಮಾರಿಗೆ ಗೋಲಾಘಾಟ್‌ನ ಕಮರ್‌ಗಾಂವ್‌ನಿಂದ ಪಿಕ್ನಿಕ್‌ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್, ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
STORY | 12 killed in bus-truck collision in Assam
— Press Trust of India (@PTI_News) January 3, 2024
READ: https://t.co/RIFKRE42J8
VIDEO: pic.twitter.com/Mdrh8gSZUx
At least 12 people were killed and around 30 others injured on Wednesday in a head-on collision between a coal-laden truck and a bus in Golaghat district of Assam, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm