ಬ್ರೇಕಿಂಗ್ ನ್ಯೂಸ್
19-11-20 06:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 19: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಿಸಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಹಫೀಜ್ ಸಯೀದ್ಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಹಫೀಜ್ ಸಯೀದ್ ಮತ್ತು ಆತನ ಆಪ್ತರಿಗೆ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣದ ಪೂರೈಕೆ ಮಾಡುತ್ತಿದ್ದ ಕಾರಣ ಕಳೆದ ಜುಲೈನಲ್ಲಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸಿದ ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯ, ಹಫೀಜ್ ಗೆ ಹತ್ತು ವರ್ಷಗಳ ಶಿಕ್ಷೆ ವಿಧಿಸಿದೆ. ಹಫೀಜ್ ಆಪ್ತರಾದ ಜಫರ್ ಇಖ್ಬಾಲ್, ಯಾಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು. ಬಳಿಕ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ನಿಷೇಧಿಸಿತ್ತು.
ಆದರೆ, ಹಫೀಜ್ ಸಯೀದ್ ವಿರುದ್ಧ ಜೈಲು ಶಿಕ್ಷೆ ಘೋಷಣೆ ಆಗಿದ್ದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಹಫೀಜ್ ವಿರುದ್ಧ ಪಾಕಿಸ್ತಾನದ ಕೋರ್ಟ್ 11 ವರ್ಷಗಳ ಶಿಕ್ಷೆ ವಿಧಿಸಿತ್ತು.
Mumbai terror attack mastermind and Jamat-Ud-Dawa (JuD) chief Hafiz Saeed was on Thursday sentenced to 10 years in jail by an anti-terrorism court in Pakistan in two more terror cases.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm