ಬ್ರೇಕಿಂಗ್ ನ್ಯೂಸ್
08-01-24 04:27 pm HK News Desk ದೇಶ - ವಿದೇಶ
ನವದೆಹಲಿ, ಜ.8: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ.
ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್ ಉಜ್ಜಾಲ್ ಭುವನ್ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್ ನ ಗೋಧ್ರಾದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಆದರೆ ಗುಜರಾತ್ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ. ಗುಜರಾತ್ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ.
ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.
In a highly anticipated judgment, the Supreme Court on Monday (January 8) set aside the remission of 11 convicts sentenced to life imprisonment for multiple murders and gang rapes, including that of Bilkis Bano, during the 2002 communal riots in Gujarat.
22-05-25 11:09 pm
HK News Desk
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
23-05-25 10:02 am
Mangalore Correspondent
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm