ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm