ಬ್ರೇಕಿಂಗ್ ನ್ಯೂಸ್
22-01-24 01:24 pm Hk News Desk ದೇಶ - ವಿದೇಶ
ಅಯೋಧ್ಯಾ, ಜ 22: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು ನೂತನ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ. ಚಳಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಅವರು ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅಡ್ವಾಣಿ ಅವರಿಗೆ 96 ವರ್ಷ. ಇಂತಹ ಪರಿಸ್ಥಿತಿಯಲ್ಲಿ ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆರೆಸ್ಸೆಸ್ ಅಧಿಕಾರಿಗಳಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಅಲೋಕ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಆಗಮಿಸಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅಡ್ವಾಣಿ ಅವರು ಇಂತಹ ಭವ್ಯ ಸಮಾರಂಭದಲ್ಲಿ ನೇರವಾಗಿ ಉಪಸ್ಥಿತರಿರುವ ಅವಕಾಶ ಸಿಕ್ಕಿದ್ದು ಅದೃಷ್ಟದ ಸಂಗತಿ ಎಂದು ಹೇಳಿದ್ದರು.
ದಿಲ್ಲಿ, ಉತ್ತರ ಪ್ರದೇಶದ ಭಾಗಗಳಲ್ಲಿ ವಿಪರೀತ ಚಳಿ ವಾತಾವರಣವಿರುವುದರಿಂದ ಆರೋಗ್ಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಇಂದು ರಾಮಮಂದಿರದಲ್ಲಿ ರಾಮ ಲಲ್ಲಾನ ಭವ್ಯವಾದ ‘ಪ್ರಾಣ ಪ್ರತಿಷ್ಠಾ’ಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ಅಯೋಧ್ಯೆಯನ್ನು ಹೂವುಗಳು ಮತ್ತು ಬೀದಿದೀಪಗಳು ಮತ್ತು ಭಗವಾನ್ ರಾಮನ ಪೋಸ್ಟರ್ಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ‘ಪ್ರಾಣ ಪ್ರತಿಷ್ಠಾ’ ವಿಧಿವಿಧಾನಗಳಿಗೆ ಚಾಲನೆ ನೀಡಲಿದ್ದಾರೆ. ಬಾಂಬ್ ನಿಗ್ರಹ ದಳ ಮತ್ತು ಸ್ನೈಪರ್ಗಳು ಸೇರಿದಂತೆ 13,000 ಪಡೆಗಳೊಂದಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎನ್ಡಿಆರ್ಎಫ್ನ ತಂಡವೊಂದು ಅಯೋಧ್ಯೆಯ ರಾಮಮಂದಿರದ ಬಳಿ ಶಿಬಿರವನ್ನು ಸ್ಥಾಪಿಸಿದೆ.
ರಾಮಜನ್ಮಭೂಮಿ ಹೋರಾಟದ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರಮುಖರಲ್ಲಿ ಒಬ್ಬರಾಗಿರುವ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ ಚಳಿ ವಾತಾವರಣ ಕಾರಣದಿಂದಾಗಿ ಅವರು ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದು ವರದಿಯಾಗಿದೆ.
ಎಲ್ಕೆ ಅಡ್ವಾಣಿ ಮತ್ತು ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರಿಗೆ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬರುವುದು ಬೇಡ ಎಂದು ಮನವಿ ಮಾಡಿರುವುದಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಇತ್ತೀಚೆಗೆ ಹೇಳಿದ್ದರು.
ಕುಟುಂಬದ ಇಬ್ಬರು ಹಿರಿಯರ ವಯಸ್ಸನ್ನು ಪರಿಗಣಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬೇಡ ಎಂದು ಮನವಿ ಮಾಡಿದ್ದೇವೆ. ಇಬ್ಬರೂ ಅದನ್ನು ಒಪ್ಪಿಕೊಂಡಿದ್ದಾರೆ" ಎಂದು ತಿಳಿಸಿದ್ದರು.
ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅಯೋಧ್ಯಾದಲ್ಲಿ ರಾಮಜನ್ಮಭೂಮಿ ಚಳವಳಿ ನಡೆಯಲು ಪ್ರಮುಖ ಕಾರಣಕರ್ತರಾದವರಲ್ಲಿ ಅನೇಕ ಹಿರಿಯ ನಾಯಕರು ನಿಧನರಾಗಿದ್ದಾರೆ. ಆಗಿನ ಚಳವಳಿ ಮತ್ತು ಈಗಿನ ಸನ್ನಿವೇಶ ಎರಡಕ್ಕೂ ಸಾಕ್ಷಿಯಾಗಿರುವ ಹಿರಿಯರನ್ನು ಮೂಲೆಗುಂಪು ಮಾಡುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಉದ್ಭವಿಸಿತ್ತು. ಉದ್ದೇಶಪೂರ್ವಕವಾಗಿಯೇ ಅಡ್ವಾಣಿ ಮತ್ತು ಜೋಶಿ ಅವರನ್ನು ಆಹ್ವಾನಿಸುತ್ತಿಲ್ಲ ಎಂದು ಆರೋಪಿಸಲಾಗಿತ್ತು.
ಇದರ ಬೆನ್ನಲ್ಲೇ ವಿಶ್ವ ಹಿಂದೂ ಪರಿಷದ್, ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿ ಮಾಡಿ ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಿತ್ತು
Veteran BJP leader LK Advani will skip today's Ram Mandir inauguration due to "extreme cold weather". He was among those who were at the forefront of the agitation for the Ram temple in Ayodhya, believed to be the birthplace of Lord Ram.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm