ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm