ಬ್ರೇಕಿಂಗ್ ನ್ಯೂಸ್
01-02-24 07:10 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ 01: ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 19 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಮೆಕ್ಸಿಕೋದಲ್ಲಿ ಮಂಗಳವಾರ ನಡೆದಿದೆ. ಸುಮಾರು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ನಲ್ಲಿ 37 ಮಂದಿ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪೆಸಿಫಿಕ್ ಕರಾವಳಿ ರಾಜ್ಯದ ಸಿನಾಲೋವಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದು ಬಂದರು ನಗರ ಮಜತ್ಲಾನ್ ಬಳಿಯ ಎಲೋಟಾ ಟೌನ್ಶಿಪ್ ವ್ಯಾಪ್ತಿಯಲ್ಲಿದೆ ಎಂದು ರಾಜ್ಯ ನಾಗರಿಕ ರಕ್ಷಣಾ ಕಚೇರಿಯ ನಿರ್ದೇಶಕ ರಾಯ್ ನವರೆಟೆ ಮಾಹಿತಿ ನೀಡಿದ್ದಾರೆ.
ಟ್ರಕ್, ಬಸ್ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬಸ್ನಲ್ಲಿದ್ದವರ ಪೈಕಿ 19 ಮಂದಿ ಸಜೀವ ದಹನವಾಗಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಕೆಲವು ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಹೊರ ಓಡಿ ಬಂದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡ ಕೆಲವರು ಮತ್ತು ಸ್ಥಳದಲ್ಲೇ ಸಾವನ್ನಪ್ಪಿದ್ದ ಪ್ರಯಾಣಿಕರ ದೇಹಗಳು ಸುಟ್ಟು ಕರಕಲಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ. ಬಸ್ ಮತ್ತು ಟ್ರಕ್ ಸುಟ್ಟು ಕರಕಲಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
A collision between a passenger bus and a freight truck on a highway in northern Mexico Tuesday left at least 19 people dead and 18 injured, local authorities said.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm