ಬ್ರೇಕಿಂಗ್ ನ್ಯೂಸ್
02-02-24 08:01 pm HK News Desk ದೇಶ - ವಿದೇಶ
ನವದೆಹಲಿ, ಫೆ.2: ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼ ವಿವಾದ ತೀವ್ರ ಗದ್ದಲಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಂಗ್ರೆಸ್ ಬಹಿರಂಗ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.
ಡಿಕೆ ಸುರೇಶ್ ಹೇಳಿಕೆ ಬಗ್ಗೆ ರಾಜ್ಯಸಭೆಯಲ್ಲಿ ಸಚಿವ ಪಿಯೂಶ್ ಗೋಯಲ್ ಪ್ರಸ್ತಾಪಿಸಿ, ದೇಶದ ಸಾರ್ವಭೌಮತ್ವ ಬಗ್ಗೆ ಕಾಂಗ್ರೆಸ್ ಸಂಸದ ಪ್ರಶ್ನೆ ಮಾಡಿದ್ದಾರೆ. ದೇಶ ವಿಭಜನೆಯ ಮಾತನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕರಾಗಲೀ, ಅದೇ ಪಕ್ಷದ ನಾಯಕರಾಗಲೀ ಡಿಕೆ ಸುರೇಶ್ ಹೇಳಿಕೆ ಬಗ್ಗೆ ಖಂಡನೆ ವ್ಯಕ್ತಪಡಿಸಿಲ್ಲ ಎಂದು ಸದನದ ಗಮನಕ್ಕೆ ತಂದರಲ್ಲದೆ, ಸಂಸದನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಲೋಕಸಭೆಯಲ್ಲಿ ಸಚಿವ ಪ್ರಹ್ಲಾದ ಜೋಷಿ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಸಂಸದ ದೇಶ ವಿಭಜನೆಯ ಮಾತುಗಳನ್ನಾಡಿ ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ. ದೇಶದ ಸಾರ್ವಭೌಮತ್ವ ವಿರುದ್ಧ ಮಾತನ್ನಾಡಿದ್ದು ಈ ಬಗ್ಗೆ ಸಂಸತ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಲೋಕಸಭೆ ಸಂಸದರಾಗಿ ಈ ದೇಶವನ್ನು ಒಡೆಯುವ ಮಾತನಾಡಿದ್ದನ್ನು ತೀವ್ರವಾಗಿ ಖಂಡಿಸುತ್ತೇನೆ. ದೇಶದ ಏಕತೆ ಮತ್ತು ಸಾರ್ವಭೌಮತ್ವದ ಮುಂದೆ ಯಾವುದೂ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಕ್ಷೇಪ ವ್ಯಕ್ತಪಡಿಸಿದರು.
ಆಡಳಿತ ಪಕ್ಷದ ನಾಯಕರ ಆಕ್ಷೇಪದ ಬಗ್ಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಯಾರೇ ಆದರೂ ದೇಶ ಒಡೆಯುವ ಬಗ್ಗೆ ಮಾತನಾಡಿದರೆ ನಾವು ಅದನ್ನು ಎಂದಿಗೂ ಸಹಿಸುವುದಿಲ್ಲ. ಅವರು ಯಾವುದೇ ಪಕ್ಷದವರಾಗಿರಲಿ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಾವು ಒಂದೇ. ಭಾರತ ಅಖಂಡವಾಗಿರಲಿದೆ. ಡಿಕೆ ಸುರೇಶ್ ಏನು ಮಾತನಾಡಿದ್ದಾರೋ ಗೊತ್ತಿಲ್ಲ. ತಪ್ಪು ಆಗಿದ್ದರೆ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಸಂಸದ ಡಿಕೆ ಸುರೇಶ್, ಬಜೆಟ್ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ತಾರತಮ್ಯ ಆಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ಹೇಳಿದ್ದರು.
Union Minister Piyush Goyal on Friday during the Parliament Budget Session raised the issue of the statement made by Congress Member of Parliament (MP) DK Suresh where he is asking for a separate country after the interim budget was presented by the Finance Minister on February 1.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm