ಬ್ರೇಕಿಂಗ್ ನ್ಯೂಸ್
03-02-24 02:01 pm HK News Desk ದೇಶ - ವಿದೇಶ
ನವದೆಹಲಿ, ಫೆ.3: ಬಿಜೆಪಿ ಭೀಷ್ಮ ಎಂದೇ ಪರಿಗಣಿಸಲ್ಪಟ್ಟ, ರಾಮ ಜನ್ಮಭೂಮಿ ಚಳವಳಿಯ ರೂವಾರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಲಾಗಿದೆ. ಭಾರತ ರತ್ನ ಪ್ರಶಸ್ತಿ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
"ಶ್ರೀ ಎಲ್.ಕೆ. ಅಡ್ವಾಣಿಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ಸುದ್ದಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ" ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.
ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಎಲ್.ಕೆ ಅಡ್ವಾಣಿ ಸುದೀರ್ಘ ಕಾಲದ ರಾಜಕೀಯ ಜೀವನದಲ್ಲಿದ್ದವರು. ಸಂಸದರಾಗಿ ದೇಶದ ಉಪ ಪ್ರಧಾನಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದವರು. 1990ರಲ್ಲಿ ರಾಮ ಜನ್ಮಭೂಮಿ ಚಳವಳಿಯ ಮುಂಚೂಣಿಯಲ್ಲಿದ್ದು ದೇಶಾದ್ಯಂತ ರಥಯಾತ್ರೆ ನಡೆಸಿದ್ದರು. ಆಮೂಲಕ ಬಿಜೆಪಿಗೆ ದೇಶ ವ್ಯಾಪಿ ವರ್ಚಸ್ಸು ಬರುವಂತೆ ಮಾಡುವಲ್ಲಿ ಶ್ರಮಿಸಿದ್ದರು. 2014ರಲ್ಲಿ ಗಾಂಧಿನಗರ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಿದ್ದರು.
ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವುದರಿಂದ ಹಿಡಿದು ಭಾರತದ ಉಪ ಪ್ರಧಾನಿಯಾಗಿ ರಾಷ್ಟ್ರ ಸೇವೆಗೆ, ರಾಷ್ಟ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಿಜೆಪಿಯ ಕಟ್ಟರ್ ಸೈದ್ಧಾಂತಿಕ ಬಣವನ್ನು ಪ್ರತಿನಿಧಿಸುತ್ತಾರೆ ಎಂದೇ ಬಿಂಬಿತರಾಗಿದ್ದ ಆಡ್ವಾಣಿ ಅವರು, 2005 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಅಲ್ಲಿ ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಹೊಗಳಿದ್ದಕ್ಕೆ ಸಂಘ ಪರಿವಾರದ ಟೀಕೆ ಎದುರಿಸಬೇಕಾಗಿ ಬಂದಿತ್ತು. 2014ರಲ್ಲಿ ಮೋದಿ ಮುನ್ನೆಲೆಗೆ ಬಂದ ಬಳಿಕ ಆಡ್ವಾಣಿ ರಾಜಕಾರಣದಿಂದ ಹಿನ್ನೆಲೆಗೆ ಸರಿದಿದ್ದರು.
Prime Minister Narendra Modi on Saturday announced the Bharat Ratna Award, the country’s highest civilian honour, to be conferred to Bharatiya Janata Party (BJP) patriarch Lal Krishna Advani.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm