ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್‌ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್‌ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್‌ಬುಕ್‌ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್‌ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್‌ಎಫ್‌ಐ, ಕೆಎಸ್‌ಯು, ಎಂಎಸ್‌ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
26-12-24 08:03 pm
Bangalore Correspondent
ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದ ತಾಯ...
26-12-24 05:11 pm
Bangalore Case, Advocate Dhahina Bhanu, Fraud...
26-12-24 04:45 pm
MLA Munirathna Egg Attack: ಶಾಸಕ ಮುನಿರತ್ನ ಮೇಲೆ...
25-12-24 10:50 pm
Ct Ravi, Inspector Suspended: ಸಿಟಿ ರವಿ ಬಂಧನ ಪ...
25-12-24 10:10 pm
25-12-24 04:21 pm
HK News Desk
Mohan Bhagwat: ಮೋಹನ್ ಭಾಗವತ್ ಸಂಘವನ್ನು ನಡೆಸುತ್ತ...
24-12-24 09:17 pm
ಕಾಸರಗೋಡಿನಲ್ಲಿ ಅಲ್ ಖೈದಾ ಉಗ್ರರ ಸ್ಲೀಪರ್ ಸೆಲ್ ರಚಿ...
23-12-24 05:23 pm
ರಾಮ ಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟು...
20-12-24 05:01 pm
ಅಂಬೇಡ್ಕರ್ ಘೋಷಣೆ ಫ್ಯಾಶನ್ ಆಗಿಬಿಟ್ಟಿದೆ ಎಂದ ಅಮಿತ್...
19-12-24 05:40 pm
26-12-24 07:07 pm
Udupi Correspondent
Mangalore, Martyr Anoop Poojary, Mp Brijesh C...
26-12-24 11:57 am
DJ artist Sajanka, Mangalore, New Year Party:...
25-12-24 10:55 pm
MP Brijesh Chowta, Mangalore, Railway: ಕೊಂಕಣ...
25-12-24 05:24 pm
Mangalore Rohan Estate Mukka, Riverside Layou...
24-12-24 02:35 pm
26-12-24 07:41 pm
Bangalore Correspondent
Fake Gold Loan, Mangalore Samaja seva sahakar...
25-12-24 02:41 pm
ಸೈಬರ್ ವಂಚಕರ ನಕಲಿ ಷೇರು ಮಾರುಕಟ್ಟೆ ಜಾಲ ; ಕೇರಳದಲ್...
24-12-24 11:05 pm
Bangalore cyber fraud, Crime: ಬೆಂಗಳೂರಿನ ಸಾಫ್ಟ...
22-12-24 07:23 pm
Mangalore Police, Cyber Fraud: ಕಮಿಷನ್ ಆಸೆಗೆ ಬ...
22-12-24 04:44 pm