ಬ್ರೇಕಿಂಗ್ ನ್ಯೂಸ್
13-02-24 12:50 pm HK News Desk ದೇಶ - ವಿದೇಶ
ನವದೆಹಲಿ, ಫೆ.13: ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ಹಲವು ರೈತ ಸಂಘಟನೆಗಳು ದೆಹಲಿ ಚಲೋ ಮೆರವಣಿಗೆಯನ್ನು ಮಂಗಳವಾರ ಆರಂಭಿಸಿದ್ದು, ಪ್ರತಿಭಟನೆ ತಡೆಯಲು ಹೆದ್ದಾರಿಯಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ರೈತರು ದ್ವಂಸ ಮಾಡಿ ಘಗ್ಗರ್ ನದಿಗೆ ಎಸೆದಿದ್ದಾರೆ.
ಬಳಿಕ ಘಗ್ಗರ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ದಾಟಿ ರೈತರು ಮುಂದೆ ಸಾಗಿದ್ದಾರೆ. ಆದರೆ, ಹರಿಯಾಣದ ಗಡಿಗೆ ಬರುವುದು ಇನ್ನು ಕಠಿಣ ಸವಾಲಾಗಿದೆ.
ಹಲವು ದಿನಗಳಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹತ್ತಿಕ್ಕಲು ಪಂಜಾಬ್ನ ಗಡಿಯಲ್ಲಿರುವ ಅಂಬಾಲಾ, ಜಿಂದ್, ಫತೇಹಾಬಾದ್, ಕುರುಕ್ಷೇತ್ರ ಮತ್ತು ಸಿರ್ಸಾದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದರೆ, ರಸ್ತೆಗಳ ಮೇಲೆ ಕಬ್ಬಿಣದ ಮೊಳೆಗಳು ಮತ್ತು ಮುಳ್ಳುತಂತಿಗಳನ್ನು ಅಳವಡಿಸಲಾಗಿದೆ.




ಇದರಿಂದ ರೈತರ ಟ್ರ್ಯಾಕ್ಟರ್ಗಳು ದೆಹಲಿಗೆ ಪ್ರವೇಶಿಸದಂತೆ ತಡೆ ಒಡ್ಡಲಾಗುತ್ತಿದೆ. ಈ ಮಧ್ಯೆ ದೆಹಲಿ ಚಲೋ ಬೆಂಬಲಿಸಿ ಕರ್ನಾಟಕ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಬರುತ್ತಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿ ಚಲೋ ಪ್ರತಿಭಟನೆಯಲ್ಲಿ ರೈತರು ಪಂಜಾಬ್, ಹರಿಯಾಣ, ಉತ್ತರಪ್ರದೇಶದಿಂದಲೂ ದೆಹಲಿಗೆ ಪ್ರವೇಶಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಕರ್ನಾಟಕದಿಂದಲೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಭಾಗಿಯಾಗಲಿದ್ದಾರೆ. ಈ ರೈತ ಹೋರಾಟದಲ್ಲಿ ಸುಮಾರು 200 ಸಂಘಟನೆಗಳಿಂದ 25,000 ರೈತರು ಪಾಲ್ಗೊಳ್ಳುವ ಸಾಧ್ಯತೆಗಳಿವೆ.
ಅಧಿಕ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ದೆಹಲಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಜೊತೆಗೆ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನ ನಿರ್ಬಂಧಿಸಲಾಗಿದೆ. ಟ್ಯಾಕ್ಟರ್ಗಳಲ್ಲಿ ಜನರನ್ನು ತುಂಬಿಕೊಂಡು ಹೋಗುವುದಕ್ಕೂ ನಿಷೇಧ ಹೇರಲಾಗಿದೆ. ಮಾರ್ಚ್ 12ರ ವರೆಗೂ ಈ ಕ್ರಮ ಇದೇ ರೀತಿ ಮುಂದುವರಿಯಲಿದೆ. ಸಿಂಘು, ಘಾಜಿಪುರ, ಟಿಕ್ರಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರು, ರೈತ ಮಹಿಳೆಯರ ಮೇಲೆ ಮಧ್ಯಪ್ರದೇಶದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಘಟನೆಯಲ್ಲಿ ಗಾಯಗೊಂಡ ರೈತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ.
![]()
ಅಲ್ಲದೇ ಪ್ರತಿಭಟನೆಗೆ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಶಾಂತಕುಮಾರ್ ದೂರಿದ್ದಾರೆ.

ರೈತರ ಬೇಡಿಕೆ ಏನು?
1. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ನ ಹೆಚ್ಚಿನ ರೈತ ಸಂಘಗಳು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತರಿಪಡಿಸುವ ಕಾನೂನನ್ನು ಒತ್ತಾಯಿಸಿವೆ.2. PTI ಪ್ರಕಾರ, ಪ್ರಸಿದ್ಧ ವಿಜ್ಞಾನಿ ಮತ್ತು ಭಾರತದಲ್ಲಿ ಹಸಿರು ಕ್ರಾಂತಿಯ ಪಿತಾಮಹ, M.S. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಒತ್ತಾಯಿಸಲಾಗುತ್ತಿದೆ.
3. ಅಲ್ಲದೆ, ರೈತರು ಕೃಷಿ ಸಾಲ ಮನ್ನಾ ಮತ್ತು ಪೊಲೀಸರು ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ.
4. ಇದಲ್ಲದೇ, ಲಖಿಂಪುರಿ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ.
Ahead of the farmers' march to the national capital on February 13, Delhi Police on Sunday imposed Section 144 of the Criminal Procedure Code in North-East Delhi and at the borders with neighbouring Uttar Pradesh to avoid any untoward incidents and ensure law and order.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm