ತಮಿಳುನಾಡು ; ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಮಹಿಳೆಯರು ಸೇರಿ 10 ಜನರ ಬಲಿ 

17-02-24 07:00 pm       HK News Desk   ದೇಶ - ವಿದೇಶ

ಪಟಾಕಿ ಸ್ಫೋಟಗೊಂಡ ಪರಿಣಾಮ ಐವರು ಮಹಿಳೆಯರು ಸೇರಿದಂತೆ 10 ಜನರು ಮೃತಪಟ್ಟ ದಾರುಣ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದೆ.

ತಮಿಳುನಾಡು, ಫೆ.17: ಪಟಾಕಿ ಸ್ಫೋಟಗೊಂಡ ಪರಿಣಾಮ ಐವರು ಮಹಿಳೆಯರು ಸೇರಿದಂತೆ 10 ಜನರು ಮೃತಪಟ್ಟ ದಾರುಣ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದೆ.

ಔಷಧಿ ಮಿಶ್ರಣದಲ್ಲಿ ಘರ್ಷಣೆ ಉಂಟಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ವಿಜಯ್ ಎಂಬುವರ ಒಡೆತನದ ಪಟಾಕಿ ಕಾರ್ಖಾನೆ ಇದಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

Firecracker factory explosion: 8 killed, 10 injured in Tamil Nadu's  Virudhnagar

Tamil Nadu: 8 killed, 10 injured in Virudhnagar firecracker factory  explosion

ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಸುದ್ದಿ ತಿಳಿದು ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸಾಮಿ ಮತ್ತು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸಾಮಾಜಿ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಕಳೆದ ವರ್ಷವೂ ಇದೇ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಅಕ್ಟೋಬರ್ ತಿಂಗಳಿನಲ್ಲಿ ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚಿನ್ಯಕನಪಟ್ಟಿಯಲ್ಲಿ ಎರಡು ಪ್ರತ್ಯೇಕ ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ 11 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಕ್ಕೆ ಸಾಂತ್ವನ ಸಹ ತಿಳಿಸಿದ್ದರು. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗೆ ತಲಾ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದರು.

At least nine people died, and several others were injured on Saturday in an explosion at a firecracker factory in Tamil Nadu's Virudhunagar district. According to locals, the magnitude of the blast was so high that four buildings, in addition to the firecracker factory, were destroyed.