ಬ್ರೇಕಿಂಗ್ ನ್ಯೂಸ್
21-02-24 12:29 pm HK News Desk ದೇಶ - ವಿದೇಶ
ನವದೆಹಲಿ, ಫೆ.21: ಸುಪ್ರೀಂ ಕೋರ್ಟ್ ಹಿರಿಯ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನವದೆಹಲಿಯಲ್ಲಿ ನಿಧನರಾದರು.
ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಾರಿಮನ್ ಅವರು 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಪಂಡಿತರಾಗಿ ದೇಶಾದ್ಯಂತ ಹೆಸರು ಮಾಡಿದ್ದಾರೆ.
ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972ರಿಂದ ದೆಹಲಿಯಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಕೀಲ ವೃತ್ತಿ ನಡೆಸಿದ್ದರು. ಮುಂಬೈಯಿಂದ 1972ರ ಮೇನಲ್ಲಿ ದೆಹಲಿಗೆ ಸ್ಥಳಾಂತರಗೊಂಡ ಬಳಿಕ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು.
ಕಾವೇರಿ ಜಲವಿವಾದ ಸಂದರ್ಭದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಫಾಲಿ ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ನೀರು ಹಂಚಿಕೆಯ ಎಲ್ಲ ವ್ಯಾಜ್ಯಗಳಲ್ಲಿ ರಾಜ್ಯದ ಪರ ವಾದಿಸುತ್ತಿದ್ದ ಇವರಿಗೆ ಅಂತಾರಾಷ್ಟ್ರೀಯ ಜಲತಜ್ಞರೆಂಬ ಖ್ಯಾತಿಯೂ ಬಂದಿತ್ತು.
ನಾರಿಮನ್ ಅವರು 1991ರಿಂದ 2010ರ ವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು. 1989 ರಿಂದ 2005ರ ವರೆಗೆ ICC (ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್) ಪ್ಯಾರಿಸ್‌ನ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್ ಉಪಾಧ್ಯಕ್ಷರಾಗಿದ್ದರು ಮತ್ತು ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್ ಮಂಡಳಿಯ ಅಧ್ಯಕ್ಷರಾಗಿದ್ದರು. 1995 ರಿಂದ 1997 ರ ವರೆಗೆ ಜಿನೀವಾದಲ್ಲಿ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದರು.
Veteran advocate Fali S Nariman passed away on Wednesday, at the age of 95. Nariman was a senior advocate of the Supreme Court and an eminent jurist. Awarded both the Padma Bhushan, in January 1991, and the Padma Vibhushan, in 2007, the veteran was a practicing lawyer for over seven decades. Nariman enrolled as an advocate of the Bombay High Court in November 1950, and was designated a senior advocate in 1961.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm