ಬ್ರೇಕಿಂಗ್ ನ್ಯೂಸ್
23-02-24 11:56 am HK News Desk ದೇಶ - ವಿದೇಶ
ಹೈದರಾಬಾದ್, ಫೆ.23: ತೆಲಂಗಾಣ ರಾಜ್ಯದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರವನ್ನು ಬಿಆರ್ ಎಸ್ ಪಕ್ಷದಿಂದ ಪ್ರತಿನಿಧಿಸುವ ಯುವ ಶಾಸಕಿ ಜಿ.ಲಾಸ್ಯ ನಂದಿತಾ ಶುಕ್ರವಾರ ಬೆಳಗ್ಗೆ ಹೈದರಾಬಾದ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಪತಂಚೇರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಾಫಿಕ್ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಶಾಸಕಿ ಲಾಸ್ಯ ನಂದಿತಾ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ವಾಹನ ನಿಯಂತ್ರಣ ಕಳೆದುಕೊಂಡು ಔಟರ್ ರಿಂಗ್ ರಸ್ತೆಯ ಎಡಭಾಗದ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿದೆ. 37 ವರ್ಷದ ಬಿಆರ್‌ಎಸ್ ಶಾಸಕಿ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಲಾಸ್ಯ ತಲೆಗೆ ತೀವ್ರವಾದ ಪೆಟ್ಟು ಬಿದ್ದಿರುವುದನ್ನು ತೋರಿಸಿದೆ. ಶಾಸಕಿ ಲಾಸ್ಯ ನಂದಿತಾ ಕಾರಿನ ಎರಡನೇ ಸಾಲಿನ ಸೀಟಿನಲ್ಲಿ ಕುಳಿತಿದ್ದರು. ಇತ್ತೀಚೆಗಷ್ಟೇ ಲಾಸ್ಯ ನಂದಿತಾ ಅವರು ಬಿಆರ್‌ಎಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನಲ್ಗೊಂಡಾಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿಯಲ್ಲಿ ಫೆ.13ರಂದು ನಡೆದ ಘಟನೆಯಲ್ಲಿ ಗೃಹರಕ್ಷಕ ಜಿ ಕಿಶೋರ್ ಅವರಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಓವರ್‌ಲೋಡ್ ಆಗಿದ್ದ ಲಿಫ್ಟ್ ನೆಲಮಾಳಿಗೆಗೆ ಬಿದ್ದ ಘಟನೆಯಲ್ಲಿಯೂ ಅವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.
ಶಾಸಕಿ ನಂದಿತಾ ಅವರು ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಐದು ಬಾರಿ ಬಿಆರ್‌ಎಸ್ ಶಾಸಕರಾಗಿದ್ದ ಜಿ ಸಾಯಣ್ಣ ಅವರ ಮಗಳು. ಕಳೆದ ವರ್ಷ ಫೆಬ್ರವರಿ 19 ರಂದು ತಮ್ಮ 72ನೇ ವಯಸ್ಸಿನಲ್ಲಿ ಸಾಯಣ್ಣ ನಿಧನರಾಗಿದ್ದರು. ಸಾಯಣ್ಣ ಮರಣದ ನಂತರ, ನವೆಂಬರ್ 2023 ರಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಅವರ ಮಗಳು ಲಾಸ್ಯಾರನ್ನು ಕಣಕ್ಕಿಳಿಸಲಾಗಿತ್ತು.
Bharat Rashtra Samithi (BRS) MLA Lasya Nanditha died in a road accident on Nehru Outer Ring Road (ORR) near Patancheru in Telangana's Sangareddy on Friday morning. Nanditha represented the Secunderabad Cantonment Assembly constituency. According to reports, her driver lost control of the car and hit the divider at the Aminpur Sultanpur ORR in the Sangareddy district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm