ಬ್ರೇಕಿಂಗ್ ನ್ಯೂಸ್
24-02-24 01:26 pm HK News Desk ದೇಶ - ವಿದೇಶ
ಉತ್ತರಪ್ರದೇಶ, ಫೆ.24: ಉತ್ತರಪ್ರದೇಶದ ಕಾಸ್‌ಗಂಜ್‌ನಲ್ಲಿ ಹುಣ್ಣಿಮೆಯ ನಿಮಿತ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ವೊಂದು ಪಲ್ಟಿಯಾಗಿ ಹೊಂಡದಲ್ಲಿ ಬಿದ್ದಿದೆ. ಟ್ರ್ಯಾಕ್ಟರ್ನ ಟ್ರಾಲಿಯಲ್ಲಿ 7 ಮಕ್ಕಳು ಹಾಗೂ 8 ಮಹಿಳೆಯರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ನಲ್ಲಿ ಒಟ್ಟು 35 ಜನರು ಪ್ರಯಾಣಿಸುತ್ತಿದ್ದರು. ಹೊಂಡದಲ್ಲಿ ಬಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಈ ವೇಳೆ ಟ್ರಾಲಿಯಲ್ಲಿದ್ದ ಕೆಲವರು ಈಜಿಕೊಂಡು ಬಂದು ದಡ ಸೇರಿದ್ದಾರೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಷ್ಟರಲ್ಲಾಗಲೇ ಅಪಘಾತದಲ್ಲಿ 7 ಮಕ್ಕಳು ಮತ್ತು 8 ಮಹಿಳೆಯರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಯೇ ಉಳಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.


ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ಪಟಿಯಾಲಿ ರಸ್ತೆಯ ನಡುವೆ ಇರುವ ಗಧೈಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇಟಾಹ್ ಜಿಲ್ಲೆಯ ಜೈತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟೆ ಕಾಸ್ ಗ್ರಾಮದಲ್ಲಿ ವಾಸಿಸುವ ಜನರು ಹುಣ್ಣಿಮೆಯ ದಿನದಂದು ಗಂಗಾ ಸ್ನಾನ ಮಾಡಲು ಕಾಸ್ಗಂಜ್ನ ಪಟಿಯಾಲಿ ತಹಸೀಲ್ ಪ್ರದೇಶದ ಕದರ್‌ಗಂಜ್ ಗಂಗಾ ಘಾಟ್‌ಗೆ ಹೋಗುತ್ತಿದ್ದರು.
ನಂತರ, ದರಿಯಾವ್‌ಗಂಜ್ ಪ್ರದೇಶದ ಗಾಧಿಯಾ ಗ್ರಾಮದ ಬಳಿ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ, ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಹೊಂಡಕ್ಕೆ ಉರುಳಿ ಬಿದ್ದು ಈ ಮಹಾ ದುರಂತ ಸಂಭವಿಸಿದೆ.
At least fifteen people have died in an accident in Uttar Pradesh's Kasganj district as tractor-trolley overturned.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm