Allahabad High court, Gyanvapi Mosque Case: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದುಗಳ ಪೂಜೆಗೆ ಅವಕಾಶ ; ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಪೂಜೆ ಮುಂದುವರಿಕೆ 

26-02-24 04:36 pm       HK News Desk   ದೇಶ - ವಿದೇಶ

ಜ್ಞಾನವಾಪಿ ಮಸೀದಿ ಕಟ್ಟಡದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಲಕ್ನೋ, ಫೆ.26: ಜ್ಞಾನವಾಪಿ ಮಸೀದಿ ಕಟ್ಟಡದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಹಿಂದೂಗಳಿಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್, ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ವಾರಣಾಸಿ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಜಿಲ್ಲಾ ನ್ಯಾಯಾಧೀಶರು ನೀಡಿರುವ ತೀರ್ಪು ಮತ್ತು ವ್ಯಾಸ್ ಜೀ ಕಾ ತೆಹಖಾನಾದಲ್ಲಿ ಪೂಜೆ ಸಲ್ಲಿಸಬಹುದು ಎಂದು ಜನವರಿ 31ರಂದು ನೀಡಿದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ಯಾವುದೇ ಅಗತ್ಯ ಕಾಣುತ್ತಿಲ್ಲ ಎಂದು ತೀರ್ಪು ನೀಡಿದ್ದಾರೆ. 

ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, "ಜನವರಿ 17 ಮತ್ತು 31ರ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಸಲ್ಲಿಸಿದ್ದ ಮೊದಲ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇದರಂತೆ ಜ್ಞಾನವಾಪಿ ಸಂಕೀರ್ಣದ 'ವ್ಯಾಸ್ ಜೀ ಕಾ ತೆಹಖಾನಾ'ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಸುವುದಕ್ಕೆ ತೊಂದರೆಯಿಲ್ಲ. ಅಂಜುಮನ್ ಇಂತೇಜಾಮಿಯಾ ಸುಪ್ರೀಂ ಕೋರ್ಟ್‌ಗೆ ಹೋಗುವ ಸಾಧ್ಯತೆ ಇದೆ. ಆಗ ನಾವು ನಮ್ಮ ಕೇವಿಯಟ್ ಅನ್ನು ಉನ್ನತ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು. 

ಜನವರಿ 31 ರಂದು ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ನೆಲಮಾಳಿಗೆ 'ವ್ಯಾಸ್ ತೆಹಖಾನಾ'ದಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು ಎಂದು ತೀರ್ಪು ನೀಡಿತ್ತು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಗೆ ಪೂಜಾ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನ ನೀಡಿತ್ತು.

The Allahabad High Court on Monday dismissed a plea by AIMC which challenged a Varanasi court’s order which had permitted the Hindu side to offer puja in the ‘vyas tehkhana’ of the Gyanvapi complex.