ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm