ಬ್ರೇಕಿಂಗ್ ನ್ಯೂಸ್
01-03-24 02:16 pm HK News Desk ದೇಶ - ವಿದೇಶ
ಹೈದರಾಬಾದ್, ಮಾ 01: ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದದ್ದಕ್ಕೆ ಅಧಿಕಾರಿಗಳು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮನನೊಂದು ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಟೇಕಂ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಬಳಿ ತೆಲುಗಿನಲ್ಲಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ “ನನ್ನನ್ನು ಕ್ಷಮಿಸಿ, ಅಪ್ಪಾ, ನಾನು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಅವಕಾಶ ಸಿಗಲಿಲ್ಲ ನನ್ನನ್ನು ಕ್ಷಮಿಸಿಬಿಡಿ. ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾನೆ.
ಶಿಕ್ಷಣ ಮಂಡಳಿಯ ಕಟ್ಟುನಿಟ್ಟಿನ ಕ್ರಮ:
ಪರೀಕ್ಷಾ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಬರಬೇಕೆಂದು ಶಿಕ್ಷಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ. ಇದರ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಕುಟುಂಬಸ್ಥರ ಆಕ್ರಂದನ:
ವಿದ್ಯಾರ್ಥಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ಕುಟುಂಬ ಸದಸ್ಯರಿಗೆ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ, ಈ ವೇಳೆ ಶಿವಕುಮಾರ್ ದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Hyderabad Student commits suicide after he was not allowed to write exams being late. His death note was later found. He jumped into the canal and committed suicide.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm