ಬ್ರೇಕಿಂಗ್ ನ್ಯೂಸ್
05-03-24 10:14 pm HK News Desk ದೇಶ - ವಿದೇಶ
ಕಾಸರಗೋಡು, ಮಾ.5: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೇರಳದ ಕಾಸರಗೋಡು ಜಿಲ್ಲೆಯ ಎರಡು ಕಡೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಜಾನ್ಸನ್ ಎಂಬ ಟ್ರಾವೆಲ್ ಏಜನ್ಸಿ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪ್ಪು ಎಂಬಲ್ಲಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಜಾನ್ಸನ್ ನನ್ನು ವಶಕ್ಕೆ ಪಡೆದು ಒಯ್ದಿದ್ದಾರೆ.
ಇದೇ ವೇಳೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಸುಂಕದಕಟ್ಟೆ ಎಂಬಲ್ಲಿ ಮುನ್ನಾ ಅಲಿ ಎಂಬಾತನ ಬಂಧನಕ್ಕಾಗಿ ಅಧಿಕಾರಿಗಳು ಬಲೆ ಬೀಸಿದ್ದರು. ಆದರೆ ಮುನ್ನಾ ಆಲಿ, ಎನ್ಐಎ ದಾಳಿ ಸುಳಿವು ಪಡೆದು ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಎರಡು ಕಡೆಯೂ ಬೆಂಗಳೂರು ವಿಭಾಗದ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುನ್ನಾ ಆಲಿ ಈ ಹಿಂದೆ ಕೊಚ್ಚಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿಯಾ ಆರೋಪಿಯಾಗಿದ್ದಾನೆ. ಪಿಎಫ್ಐ ಸಂಘಟನೆಯ ಹವಾಲಾ ಹಣದ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಕಾಸರಗೋಡು ಜಿಲ್ಲೆಯ ಎರಡು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದೇಶಾದ್ಯಂತ ಏಳು ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ಪಿಎಫ್ಐ ಸಂಘಟನೆಗೆ ಹವಾಲಾ ರೂಪದಲ್ಲಿ ಹಣ ಪೂರೈಸುತ್ತಿದ್ದ ಪ್ರಕರಣದಲ್ಲಿ ಬಂಟ್ವಾಳ, ಮಂಗಳೂರಿನಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದಿದ್ದರು. ಅದೇ ಪ್ರಕರಣದಲ್ಲಿ ಜಾನ್ಸನ್ ಬಂಧನ ಆಗಿದೆ ಎನ್ನುವ ಮಾಹಿತಿಯಿದೆ.
The National Investigative Agency (NIA) carried out raids at two locations reportedly in connection with a hawala case in Kasaragod district of Kerala on March 5. The operation led to the reported arrest of a travel agent by the NIA.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm