ಕೇರಳದಲ್ಲಿ ಭೂಕುಸಿತ: 5 ಜನ ಸಾವು, ಹಲವರು ಕಣ್ಮರೆ

07-08-20 07:53 am       Headline Karnataka News Network   ದೇಶ - ವಿದೇಶ

ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು 5 ಜನರು ಮೃತಪಟ್ಟಿದ್ದು ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ತಿರುವನಂತಪುರ, (ಆ.7): ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು 5 ಜನರು ಮೃತಪಟ್ಟಿದ್ದು ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಜಮಲೈ ಪ್ರದೇಶದಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಲ್ಲಿ 70 ರಿಂದ 80 ಜನ ವಾಸವಾಗಿದ್ದರು ಎನ್ನಲಾಗಿದೆ. ಭಾರೀ ಮಳೆಗೆ ನಿನ್ನೆ ರಸ್ತೆ ಸಂಪರ್ಕ ಸಂಪೂರ್ಣವಾಘಿ ಕಡಿದು ಹೋಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣೆ ಪಡೆಯ ಅಧಿಕಾರಿಗಳು ಹರಸಾಹಸ ಪಟ್ಟು ಘಟನಾ ಸ್ಥಳಕ್ಕೆ ತೆರಳಿದ್ದು 10 ಜನರನ್ನು ರಕ್ಷಣೆ ಮಾಡಿದ್ದರೆ. 5 ಜನರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈಗಾಲೇ ಒಂದು ಎನ್‌ಡಿಆರ್‌ಎಫ್‌ ತಂಡ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಮತ್ತೊಂದು ತಂಡ ಮಧ್ಯಾಹ್ನ ಅಲ್ಲಿಗೆ ತೆರಳಲಿದ್ದು, ಅಪಾಯಕ್ಕೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಕಾರ್ಯಾಚರಣೆ ಸೇನೆಯ ಹೆಲಿಕಾಫ್ಟರ್‌ ಬೇಕು ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.