ಬ್ರೇಕಿಂಗ್ ನ್ಯೂಸ್
23-03-24 11:43 am HK News Desk ದೇಶ - ವಿದೇಶ
ಮಾಸ್ಕೋ, ಮಾ 23: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಾರೀ ಭಯೋತ್ಪಾದಕ ದಾಳಿ ನಡೆದಿದೆ. ಹಲವು ದಾಳಿಕೋರರು ಕ್ರಾಕೋವ್‌ನ ಕನ್ಸರ್ಟ್ ಹಾಲ್‌ಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ ಮತ್ತು 145 ಜನರು ಗಾಯಗೊಂಡಿದ್ದಾರೆ. ರಷ್ಯಾದ ಪ್ರಸಿದ್ಧ ರಾಕ್ ಬ್ಯಾಂಡ್ 'ಫಿಕ್ನಿಕ್' ಸಂಗೀತ ಕಚೇರಿಯಲ್ಲಿ ಈ ದಾಳಿ ನಡೆದಿದೆ.
ಇಸ್ಲಾಮಿಕ್ ಸ್ಟೇಟ್ ಗುಂಪು ಸಾಮಾಜಿಕ ಜಾಲತಾಣದಲ್ಲಿ ಅಂಗಸಂಸ್ಥೆ ಚಾನಲ್‌ಗಳಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ಅವರು, ಇದೊಂದು ದೊಡ್ಡ ದುರಂತ ಎಂದು ಹೇಳಿದ್ದಾರೆ. ಮತ್ತು ಅಧಿಕಾರಿಗಳು ಭಯೋತ್ಪಾದಕ ದಾಳಿ ಕುರಿತು ತನಿಖೆ ನಡೆಸುತ್ತಿದ್ದಾರೆ.
145 ಗಾಯಾಳುಗಳ ಪಟ್ಟಿ ಬಿಡುಗಡೆ:
ಮೊದಲು ಕಟ್ಟಡಕ್ಕೆ ನುಗ್ಗಿದ ದುಷ್ಕರ್ಮಿಗಳು ಒಳಗಿದ್ದವರ ಮೇಲೆ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದರು. ಸಂಗೀತಗೋಷ್ಠಿ ಮುಗಿದು ಹೊರಗೆ ಹೋಗುತ್ತಿದ್ದಾಗ ಒಮ್ಮೆ ಗುಂಡು ಹಾರಿಸಲಾಯಿತು. ಏನಾಗುತ್ತೆ ಎಂಬುದನ್ನು ತಿಳಿಯದೆ ಅಲ್ಲಿದ್ದ ಜನರು ತುಂಬಾ ಭಯದಿಂದ ಆಸನಗಳ ನಡುವೆ ಅಡಗಿ ಕುಳಿತಿದ್ದರು. ಮಾಹಿತಿ ಪಡೆದ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸಭಾಂಗಣದಲ್ಲಿ ಸಿಲುಕಿದ್ದ ಹಲವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಆರೋಗ್ಯ ಅಧಿಕಾರಿಗಳು 145 ಗಾಯಾಳುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅವರಲ್ಲಿ ಐವರು ಮಕ್ಕಳು ಸೇರಿದಂತೆ 115 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಪೊಲೀಸರ ಕೈಗೆ ಸಿಕ್ಕಿಬಿದ್ದ ಓರ್ವ ದಾಳಿಕೋರ:
ಈ ದಾಳಿಗೆ ಸಂಬಂಧಿಸಿದಂತೆ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವ ದೃಶ್ಯಗಳು ಕಂಡುಬಂದಿದ್ದು, ಇಲ್ಲಿದ್ದ ಜನರು ಭಯಭೀತರಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿ ನಡೆದ ಸಮಯದಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ತುಂಬಾ ಕಪ್ಪು ಹೊಗೆ ಹರಡಿತು. ಐವರು ಬಂದೂಕುಧಾರಿಗಳು ಗುಂಡಿನ ಮಳೆಗರಿದಿದ್ದಾರೆ. ಈ ಪೈಕಿ ಓರ್ವ ದಾಳಿಕೋರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ. ಸಭಾಂಗಣಕ್ಕೆ ನುಗ್ಗಿದ ಶಸ್ತ್ರಧಾರಿಗಳು ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಬೆಂಕಿ ಕಟ್ಟಡದಾದ್ಯಂತ ವ್ಯಾಪಿಸಿದೆ.
Assailants burst into a large concert hall in Moscow on Friday and sprayed the crowd with gunfire, killing over 60 people, injuring more than 100 and setting fire to the venue in a brazen attack just days after President Vladimir Putin cemented his grip on power in a highly orchestrated electoral landslide.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm