ಬ್ರೇಕಿಂಗ್ ನ್ಯೂಸ್
25-03-24 12:09 pm HK News Desk ದೇಶ - ವಿದೇಶ
ಈರೋಡ್, ಮಾ.25: ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಎಂಡಿಎಂಕೆ ಸಂಸದ ಎ ಗಣೇಶಮೂರ್ತಿ (76) ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ಕೀಟನಾಶಕ 'ಸಲ್ಫಸ್' ಸೇವಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅವರ ಸ್ಥಿತಿ ಗಂಭೀರವಾಗಿದೆ.
ಇದನ್ನು ಕೇಳಿ ಆಘಾತಗೊಂಡ ಕುಟುಂಬದವರು ಅವರನ್ನು ಚಿಕಿತ್ಸೆಗಾಗಿ ಈರೋಡ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಐಸಿಯುಗೆ ದಾಖಲಿಸಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಅವರಲ್ಲಿ ಹೆಚ್ಚಿನ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಗಣೇಶಮೂರ್ತಿ ಅವರಿಗೆ ಟಿಕೆಟ್ ನೀಡಲು ಎಂಡಿಎಂಕೆ ಪಕ್ಷದ ಹೈ ಕಮಾಂಡ್ ನಿರಾಕರಿಸಿದೆ. ಇದರಿಂದ ನೊಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪಕ್ಷದ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜತೆ ಮೈತ್ರಿ ಹೊಂದಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ. ಎಂಡಿಎಂಕೆಗೆ ತಿರುಚಿರಾಪಳ್ಳಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
Ganeshamoorthy of the MDMK, the sitting Lok Sabha MP from Erode constituency in Tamil Nadu, was rushed to a hospital after he allegedly consumed pesticide. Ganesamoorthy, who was elected on a DMK ticket in the 2019 Lok Sabha polls, was admitted to a private hospital by his family members after he developed uneasiness and began to puke in the morning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm