ಬ್ರೇಕಿಂಗ್ ನ್ಯೂಸ್
25-03-24 11:09 pm HK News Desk ದೇಶ - ವಿದೇಶ
ಹೈದರಾಬಾದ್, ಮಾ.25: ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣ ರಾಹಕೀಯ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ದಳದ ಮಾಜಿ ಮುಖ್ಯಸ್ಥ ಡಾ. ಟಿ ಪ್ರಭಾಕರ್ ರಾವ್ ಅವರನ್ನು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮಾಡಿದ್ದು ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.
ಪ್ರಭಾಕರ್ ರಾವ್ ಸದ್ಯ ಅಮೆರಿಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಫೋನ್‌ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದ್‌ನಲ್ಲಿ ಪ್ರಭಾಕರ್ ರಾವ್ ಅವರ ಮನೆ, ಐ ನ್ಯೂಸ್ ಎಂಬ ತೆಲುಗು ಟಿವಿ ವಾಹಿನಿಯನ್ನು ನಡೆಸುತ್ತಿರುವ ಶ್ರವಣ್ ರಾವ್ ಅವರ ನಿವಾಸ ಸೇರಿದಂತೆ ಸುಮಾರು ಹನ್ನೆರಡು ಇತರ ಸ್ಥಳಗಳನ್ನು ಹುಡುಕಾಟ ನಡೆಸಲಾಗಿದೆ. ಶ್ರವಣ್ ರಾವ್ ಕೂಡ ದೇಶ ತೊರೆದಿದ್ದಾರೆ ಎಂದು ನಂಬಲಾಗಿದ್ದು, ಇಸ್ರೇಲ್‌ನಿಂದ ಫೋನ್ ಟ್ಯಾಪಿಂಗ್ ಉಪಕರಣಗಳನ್ನು ತರಿಸಿ ಸರ್ವರ್‌ಗಳನ್ನು ಸ್ಥಾಪಿಸಲು ಇವರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್‌ಪಿ ಪ್ರಣೀತ್ ರಾವ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಭುಜಂಗ ರಾವ್ ಮತ್ತು ತಿರುಪತಣ್ಣ ಖಾಸಗಿ ವ್ಯಕ್ತಿಗಳ ಮೇಲೆ ಅಕ್ರಮವಾಗಿ ನಿಗಾ ವಹಿಸಿ ಸಾಕ್ಷ್ಯ ನಾಶಪಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Former Telangana Intelligence Bureau chief T Prabhakhar Rao has been named as Accused No 1 in the phone-tapping case that has roiled the state ahead of a general election. Mr Rao - on whose order reams of electronic data is said to have been gathered by illegally tapping the phones of opposition leaders during the earlier BRS government led by K Chandrashekar Rao - is reportedly in the United States. A look-out notice has been issued in his name.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm