ಬ್ರೇಕಿಂಗ್ ನ್ಯೂಸ್
01-04-24 06:30 pm HK News Desk ದೇಶ - ವಿದೇಶ
ಢಾಕಾ, ಏ.01: ಬಾಯ್ಕಾಟ್ ಇಂಡಿಯಾ ಅಭಿಯಾನದ ಬಗ್ಗೆ ವಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭಾರತೀಯ ವಸ್ತುಗಳನ್ನು ಬಹಿಷ್ಕರಿಸುವ ವಿಪಕ್ಷಗಳ ನೈತಿಕತೆಯನ್ನು ಪ್ರಶ್ನಿಸಿದ್ದಾರೆ.
ಭಾರತೀಯ ವಸ್ತುಗಳನ್ನು ಬಹಿಷ್ಕರಿಸಿ ಎಂದು ಅಭಿಯಾನ ನಡೆಸುತ್ತಿರುವ ವಿಪಕ್ಷಗಳು, ಒಂದು ವೇಳೆ ಅವರು ಭಾರತೀಯ ಖಾದ್ಯ ಇಲ್ಲದೇ ಊಟೋಪಚಾರ ಮಾಡುತ್ತಿದ್ದಾರೆಯೇ ಎಂಬುದಾಗಿ ಉತ್ತರ ನೀಡಬೇಕಾಗಿದೆ ಎಂದು ಹಸೀನಾ ತಿರುಗೇಟು ನೀಡಿದ್ದಾರೆ.
ಬಾಯ್ಕಾಟ್ ಅಭಿಯಾನ ನಡೆಸುತ್ತಿರುವವರ ಎಷ್ಟು ಮಂದಿ ಪತ್ನಿಯರು ಭಾರತೀಯ ಸೀರೆಗಳನ್ನು ಉಟ್ಟುಕೊಂಡಿದ್ದಾರೆ? ಹಾಗಾದರೆ ಪತ್ನಿಯರು ತೊಟ್ಟ ಸೀರೆಯನ್ನು ಯಾಕೆ ಸುಟ್ಟು ಹಾಕಿಲ್ಲ? ಎಂದು ಹಸೀನಾ ಪ್ರಶ್ನಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಪಕ್ಷ ಜಯಭೇರಿ ಬಾರಿಸುವ ಮೂಲಕ ಐದನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಬಾಂಗ್ಲಾದೇಶ ಚುನಾವಣೆಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವು ಪ್ರಚಂಡ ಗೆಲುವು ಸಾಧಿಸಿತ್ತು. 299 ಕ್ಷೇತ್ರಗಳಲ್ಲಿ ಅವಾಮಿ ಲೀಗ್ 216 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಸಂದರ್ಭದಲ್ಲಿ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ತದನಂತರ ವಿಪಕ್ಷಗಳು Boycott India ಅಭಿಯಾನ ಆರಂಭಿಸಿದ್ದವು
ಈ ವರ್ಷದ ಆರಂಭದಲ್ಲಿ, ಬಾಂಗ್ಲಾದಲ್ಲಿ ಒಬ್ಬ ದೇಶಭ್ರಷ್ಟ ಬ್ಲಾಗರ್ ಎಕ್ಸ್‌ನಲ್ಲಿ ಹಾಕಿದ ಪೋಸ್ಟರ್ 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ' ಎಂದಿತ್ತು. ಅಂದಿನಿಂದ, ಈ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಲಾರಂಭಿಸಿದೆ. ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತದ ಆಪಾದಿತ ಹಸ್ತಕ್ಷೇಪವನ್ನು ವಿರೋಧಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಯಿತು.
Bangladesh Prime Minister Sheikh Hasina slammed the opposition party - Bangladesh Nationalist Party (BNP) - for making saree, a classic Indian garment, a matter of politics. The country's opposition party ran an anti-India campaign targetting sarees and other products, stating that they would burn their wives' Indian sarees.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 08:53 pm
Mangalore Correspondent
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm