Arvind Kejriwal, Enforcement Directorate, Newdelhi: ಏ.15 ರವರೆಗೆ ದೆಹಲಿ ಸಿಎಂಗೆ ನ್ಯಾಯಾಂಗ ಬಂಧನ ; ಮೋದಿ ಮಾಡ್ತಿರೋ ಕೆಲಸ ದೇಶಕ್ಕೆ ಒಳ್ಳೆಯದಲ್ಲ, ಕಿಡಿಕಾರಿದ ಕೇಜ್ರಿವಾಲ್

01-04-24 06:53 pm       HK News Desk   ದೇಶ - ವಿದೇಶ

ಲಿಕ್ಕರ್ ಪಾಲಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈಗ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ

ನವದೆಹಲಿ, ಏ.1: ಲಿಕ್ಕರ್ ಪಾಲಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈಗ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಕೇಜ್ರಿವಾಲ್ ಅವರನ್ನು ಸೋಮವಾರ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯವು ಏಪ್ರಿಲ್ 15ರವರೆಗೆ ಬಂಧನ ಅವಧಿಯನ್ನು ವಿಸ್ತರಿಸಿದೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಜೈಲು ಪಾಲಾಗಿದ್ದಾರೆ. ಮಾತ್ರವಲ್ಲದೆ ಹೊರ ಬರುವ ಅವರ ಪ್ರಯತ್ನಗಳು ವಿಫಲವಾಗುತ್ತಲೇ ಇವೆ. ಇದರಿಂದಾಗಿ ಲೋಕಸಭಾ ಚುನಾವಣೆಯ ಬಗ್ಗೆ ಆಮ್ ಆದ್ಮಿ ಪಕ್ಷದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Delhi Court extends bail for Land-for-Job Scam associate Amit Katyal

ಇಂದು ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಲಾಯಿತು. ಬಿಗಿ ಭದ್ರತೆಯ ನಡುವೆ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿಯನ್ನು ನ್ಯಾಯಾಲಯಕ್ಕೆ ಕರೆತಂದಿತು. ಕೇಜ್ರಿವಾಲ್ ಅವರು ಕೋರ್ಟ್ ಆವರಣಕ್ಕೆ ಪ್ರವೇಶಿಸುವ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದರು.

ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೇಜ್ರಿವಾಲ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಪ್ರಧಾನಿ ಮಾಡುತ್ತಿರುವ ಕೆಲಸ ದೇಶಕ್ಕೆ ಒಳ್ಳೆಯದಲ್ಲ. ಮೋದಿ ಅವರು ಸರಿಯಾದ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದೆಲ್ಲದರ ನಡುವೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಜೈಲಿನಿಂದಲೇ ಶ್ರೀರಾಮನ ಜಪಮಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ ಕಥೆ ಏನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕೇಜ್ರಿವಾಲ್ ಪತ್ನಿ ಹಾಗೂ ಆಪ್ ನಾಯಕರು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯ ವೇಳೆ ಕೇಜ್ರಿವಾಲ್ ಅವರನ್ನು ಬಂಧಿಸಿ ಗೆಲ್ಲುವ ಸಂಚು ರೂಪಿಸಲಾಗಿದೆ ಎಂದು ದೂರಲಾಗಿದೆ.

ಹೀಗಾಗಿ ಆಪ್ ಪಕ್ಷದ ಮುಂದಿನ ನಡೆ ಏನು ಎನ್ನುವ ಬಗ್ಗೆ ಕೇಜ್ರಿವಾಲ್ ಅವರು ಜೈಲಿನಿಂದಲೇ ತೀರ್ಮಾನಿಸುತ್ತಿದ್ದಾರೆ. ಇದು ಚುನಾವಣೆಯ ಮೇಲೆ ಹೊಡೆತ ಬೀಳಲಿದಿಯಾ ಅಥವಾ ಕೇಜ್ರಿವಾಲ್ ಅವರನ್ನು ಬಂಧನದಿಂದ ಹೊರ ಬಿಡಿಸಿಕೊಂಡು ಬರಲಾಗುತ್ತಾ ? ಮತದಾರರ ಮತ ಯಾರಿಗೆ ಎನ್ನುವುದನ್ನು ಕಾದು ನೋಡಬೇಕಿದೆ.

Delhi Chief Minister Arvind Kejriwal was sent to judicial custody till April 15 on April 1. He was produced before Special Judge Kaveri Baweja in a Delhi court in a jam-packed courtroom after his Enforcement Directorate (ED) custodial remand ended in the Excise policy-linked money laundering case.