4 crore cash seized in Chennai: ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಣೆ ; 4 ಕೋಟಿ ರೊ. ಕ್ಯಾಶ್ ಜೊತೆಗೆ ಸಿಕ್ಕಿಬಿದ್ದ ಮೂವರು ಬಿಜೆಪಿ ಕಾರ್ಯಕರ್ತರು, ತಿರುನೆಲ್ವೇಲಿ ಅಭ್ಯರ್ಥಿ ವಿರುದ್ಧ ಕ್ರಮಕ್ಕೆ ಡಿಎಂಕೆ ಒತ್ತಾಯ 

08-04-24 05:07 pm       HK News Desk   ದೇಶ - ವಿದೇಶ

ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್‌ ಸ್ಕ್ವಾಡ್‌ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.

ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್‌ ಸ್ಕ್ವಾಡ್‌ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.

ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್‌ ನಾಗೇಂದ್ರನ್‌ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮೂವರು ಎಗ್ಮೋರ್‌ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು  ತಿಳಿಸಿದರು.

ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್‌ ನಾಗೇಂದ್ರನ್‌ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.

ನಾಗೇಂದ್ರನ್‌ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್‌. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್‌ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.

Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.