ಬ್ರೇಕಿಂಗ್ ನ್ಯೂಸ್
09-04-24 01:01 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಏ 09: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ಸಾವಿಗೀಡಾಗಿದ್ದಾನೆ. ಕಳೆದ ತಿಂಗಳಿನಿಂದ ನಾಪತ್ತೆಯಾಗಿದ್ದ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿದ್ದು, ಒಂದು ವಾರದೊಳಗೆ ಎರಡನೇ ಭಾರತೀಯನ ಸಾವು ಇದಾಗಿದೆ.
ಮೃತ ವಿದ್ಯಾರ್ಥಿಯನ್ನು ಹೈದರಾಬಾದ್‌ನ ನಾಚಾರಂ ಮೂಲದ ಮೊಹಮ್ಮದ್ ಅಬ್ದುಲ್ ಅರ್ಫಾತ್ ಎಂದು ಗುರುತಿಸಲಾಗಿದೆ. ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಐಟಿ ಸ್ನಾತಕೋತ್ತರ ಪದವಿ ಪಡೆಯಲು ಕಳೆದ ವರ್ಷ ಮೇ ತಿಂಗಳಲ್ಲಿ ಅಮೆರಿಕಕ್ಕೆ ತೆರಳಿದ್ದ.
ಶೋಧ ಕಾರ್ಯಾಚರಣೆ ವೇಳೆ ಮೊಹಮ್ಮದ್ ಅಬ್ದುಲ್ ಅರ್ಫಾತ್ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದು ದುಃಖಿತರಾಗಿದ್ದೇವೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅರ್ಫಾತ್ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಕಾನ್ಸುಲೇಟ್, ಸಾವಿನ ಬಗ್ಗೆ ಸಂಪೂರ್ಣ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ, ಪಾರ್ಥಿವ ಶರೀರವನ್ನು ಭಾರತಕ್ಕೆ ಸಾಗಿಸಲು ನಾವು ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತೇವೆ ಇಂದು ಭರವಸೆ ನೀಡಿದೆ.
ಅರ್ಫಾತ್ ಕೊನೆಯದಾಗಿ ಮಾರ್ಚ್ 7ರಂದು ತನ್ನೊಂದಿಗೆ ಮಾತನಾಡಿದ್ದು, ಅಂದಿನಿಂದ ಕುಟುಂಬದೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎಂದು ಅರ್ಫಾತ್ ತಂದೆ ಮೊಹಮ್ಮದ್ ಸಲೀಮ್ ಹೇಳಿದ್ದಾರೆ. ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಯುಎಸ್‌ನಲ್ಲಿರುವ ಅರ್ಫಾತ್‌ನ ರೂಮ್‌ಮೇಟ್‌ಗಳು ಕ್ಲೀವ್‌ಲ್ಯಾಂಡ್ ಪೊಲೀಸರಿಗೆ ಕಾಣೆಯಾದ ಬಗ್ಗೆ ದೂರು ನೀಡಿದ್ದಾಗಿ ತಂದೆಗೆ ತಿಳಿಸಿದ್ದರು.
ಆದಾಗ್ಯೂ, ಮಾರ್ಚ್ 19ರಂದು ಅರ್ಫಾತ್ ಕುಟುಂಬಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಮಾಡಿ, ಅರ್ಫಾತ್ ಅವರನ್ನು ಡ್ರಗ್ಸ್ ಮಾರಾಟ ಮಾಡುವ ಗ್ಯಾಂಗ್ ಅಪಹರಿಸಿದೆ. ಆತನನ್ನು ಬಿಡುಗಡೆ ಮಾಡಲು 1,200 ಡಾಲರ್ಗೆ ಬೇಡಿಕೆಯಿಟ್ಟಿದ್ದರು. ಈ ಹಣವನ್ನು ಪಾವತಿಸದಿದ್ದರೆ ಅರ್ಫಾತ್‌ನ ಕಿಡ್ನಿಗಳನ್ನು ಮಾರಾಟ ಮಾಡುವುದಾಗಿಯೂ ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದ ಎಂದು ಆತನ ತಂದೆ ತಿಳಿಸಿದ್ದಾರೆ.
ನನಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು. ಕರೆ ಮಾಡಿದವರು ನನ್ನ ಮಗನನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ನನಗೆ ತಿಳಿಸಿದರು. ಆದರೆ, ಕರೆ ಮಾಡಿದವರು ಹಣ ಪಾವತಿಯ ವಿಧಾನವನ್ನು ಹೇಳಿಲ್ಲ. ಹಣದ ಬಗ್ಗೆ ಅಷ್ಟೇ ಹೇಳಿದರು. ನನ್ನ ಮಗನೊಂದಿಗೆ ಮಾತನಾಡಲು ಅವಕಾಶ ನೀಡುವಂತೆ ಕೇಳಿದಾಗ ನಿರಾಕರಿಸಿದ್ದರು ಎಂದು ಹೈದರಾಬಾದ್‌ನಲ್ಲಿರುವ ತಂದೆ ಸಲೀಂ ಮಾಹಿತಿ ನೀಡಿದ್ದಾರೆ.
ಕಳೆದ ವಾರವಷ್ಟೇ ಓಹಿಯೋದಲ್ಲಿ ಭಾರತೀಯ ವಿದ್ಯಾರ್ಥಿ ಉಮಾ ಸತ್ಯ ಸಾಯಿ ಸಾವನ್ನಪ್ಪಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Amid rising cases of deaths among Indian students in the USA, a 25-year-old Indian student who had been missing since last month was found dead in Cleveland, the second death within a week as the community grapples with a string of such tragedies.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm