ಬ್ರೇಕಿಂಗ್ ನ್ಯೂಸ್
14-04-24 02:11 pm HK NEWS ದೇಶ - ವಿದೇಶ
ನವದೆಹಲಿ, ಎ.14: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಕಲ್ಪ ಪತ್ರದ ಹೆಸರಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ್ದು, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ.
ಮುಂದಿನ 5 ವರ್ಷಗಳ ವರೆಗೆ ಉಚಿತವಾಗಿ ಪಡಿತರ ವಿತರಣೆ, ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧಗಳ ಪೂರೈಕೆ, ಆಯುಷ್ಮಾನ್ ಭಾರತ್ ಯೋಜನೆ ಮುಂದುವರಿಕೆ ಸೇರಿ ಹಲವು ಘೋಷಣೆಗಳನ್ನು ಮೋದಿ ಮಾಡಿದ್ದಾರೆ.
70 ವರ್ಷ ದಾಟಿದವರಿಗಾಗಿ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ, ಎಲ್ಲರಿಗೂ ಉಚಿತ ಚಿಕಿತ್ಸೆ, ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯಲ್ಲಿ ಔಷಧ ವಿತರಣೆ, ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ, ಪೈಪ್‌ಲೈನ್ ಮೂಲಕ ಅಡುಗೆ ಅನಿಲ ಪೂರೈಕೆ, ಕೋಟ್ಯಂತರ ಕುಟುಂಬಗಳಿಗೆ ಸೋಲಾರ್ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ, ಮುದ್ರಾ ಯೋಜನೆ ಅಡಿಯಲ್ಲಿ ಸಿಗುವ ಸಾಲದ ಮೊತ್ತ 20 ಲಕ್ಷ ರೂ.ಗೆ ಏರಿಕೆ,
ಅಮೃತ್ ಭಾರತ್, ವಂದೇ ಭಾರತ್ ರೈಲುಗಳ ಸಂಖ್ಯೆ ಹೆಚ್ಚಳ, ಮಂಗಳಮುಖಿಯರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಲಾಗಿದೆ.
10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ, ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ, ರೈತರಿಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ, ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸುವುದು ಸೇರಿದಂತೆ ಹತ್ತು ವರ್ಷಗಳಲ್ಲಿ ಆಗಿರುವ ಬದಲಾವಣೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು 76 ಪುಟಗಳ ಸಂಕಲ್ಪ ಪತ್ರವನ್ನು ಪ್ರಣಾಳಿಕೆಯಲ್ಲಿ ತೋರಿಸಲಾಗಿದೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ ಅಂಬೇಡ್ಕರ್ ಪುತ್ಥಳಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುಷ್ಪನಮನ ಸಲ್ಲಿಸಿದರು.
ಸಂಕಲ್ಪ ಪತ್ರ ಬಿಡುಗಡೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಂದಿನ 5 ವರ್ಷಗಳ ಕಾಲ ದೇಶಾದ್ಯಂತ ಬಡವರಿಗೆ ಉಚಿತ ಧಾನ್ಯ ಯೋಜನೆ ಮುಂದುವರಿಯಲಿದೆ. ಬಿಜೆಪಿಯ ನಿರ್ಣಯ ಪತ್ರಕ್ಕಾಗಿ ಇಡೀ ದೇಶವು ಕುತೂಹಲದಿಂದ ಕಾಯುತ್ತಿದೆ. 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿ ಅಂಶವನ್ನು ಗ್ಯಾರಂಟಿಯಾಗಿ ಜಾರಿಗೊಳಿಸಿದ್ದೇ ಈ ನಿರೀಕ್ಷೆಗೆ ಕಾರಣ. ಈ ವೇಳೆ ದೇಶದ ಹಲವು ರಾಜ್ಯಗಳಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ ಎಂದರು.
The BJP today released its manifesto for the 2024 Lok Sabha election. The document, which underlined the party's 'Modi ki guarantee' slogan, lays down the Narendra Modi government's vision and promises for every section of the society. The manifesto stressed Prime Minister Modi's focus on 'GYAN' - the poor, the youth, farmers and the women.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm