ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ; ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ 

27-04-24 05:46 pm       HK News Desk   ದೇಶ - ವಿದೇಶ

ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ  ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.

Bengaluru water crisis: Residents fined for 'misuse' of drinking water -  India Today

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್​ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.

The Centre has released Rs 3,454 crore to Karnataka to take up its drought relief works.