ಬ್ರೇಕಿಂಗ್ ನ್ಯೂಸ್
08-05-24 10:44 am HK News Desk ದೇಶ - ವಿದೇಶ
ಹೈದರಾಬಾದ್, ಮೇ 8: ಹೈದರಾಬಾದ್ನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಒಡಿಶಾ ಮತ್ತು ಛತ್ತೀಸ್‌ಗಢ ನಿವಾಸಿಗಳೆಂದು ಗುರುತಿಸಲಾಗಿದೆ.

ಈ ಘಟನೆ ರೇಣುಕಾ ಎಲ್ಲಮ್ಮ ಕಾಲನಿಯಲ್ಲಿ ನಡೆದಿದೆ. ಅಪಾರ್ಟ್‌ಮೆಂಟ್‌ನ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ತಾತ್ಕಾಲಿಕ ಶೆಡ್ನಲ್ಲಿ ವಾಸಿಸುತ್ತಿದ್ದರು. ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಗೋಡೆ, ಶೆಡ್ ಮೇಲೆ ಕುಸಿದು ಅವಘಡ ಸಂಭವಿಸಿದೆ. ಇದರಿಂದ ಮಗು ಸೇರಿದಂತೆ ಶೆಡ್ನಲ್ಲಿದ್ದ ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಜಿಎಚ್‌ಎಂಸಿ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದರು. ಜೆಸಿಬಿಗಳ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆಯಲಾಯಿತು.
ಮೃತರನ್ನು ರಾಜು (25), ರಾಮ್ ಯಾದವ್ (34), ಗೀತಾ (32), ಹಿಮಾಂಶು (4), ಖುಷಿ, ತಿರುಪತಿ ರಾವ್ (20) ಮತ್ತು ಶಂಕರ್ (22) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಡಿಶಾ ಮತ್ತು ಛತ್ತೀಸ್‌ಗಢದಿಂದ ಉದ್ಯೋಗಕ್ಕಾಗಿ ಹೈದರಾಬಾದ್ಗೆ ಬಂದಿದ್ದರು ಎಂದು ತಿಳಿದುಬಂದಿದೆ.
ರೈಸ್ ಡೆವಲಪರ್ಸ್ ನಿರ್ಮಾಣದ ಆವರಣದಲ್ಲಿ ಈ ಘಟನೆ ನಡೆದಿದೆ. ಅಪಘಾತದ ವಿಷಯ ತಿಳಿದ ಕುಕ್ಕಟಪಲ್ಲಿ ಎಸಿಪಿ ಶ್ರೀನಿವಾಸ ರಾವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಂದಹಾಗೆ ಮಂಗಳವಾರ ತೆಲಂಗಾಣದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೈದರಾಬಾದ್ ನಗರದ ಹಲವೆಡೆ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿದೆ. ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಮರಗಳು ಧರೆಗುರುಳಿವೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿಯ ಪ್ರಕಾರ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ಕೇಂದ್ರ ಕಚೇರಿಯ ಸ್ಥಳದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ 84.5 ಮಿಮೀ ಮಳೆಯಾಗಿದೆ.
As many as seven persons, including a four-year-old child, were killed when a retaining wall at an under-construction apartment came crashing down due to heavy rain in Bachupally area here, police said on Wednesday. According to Bachupally police, the victims were migrant workers who belonged to Odisha and Chhattisgarh and the incident happened on Tuesday evening.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm