ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm